ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಹಣ್ಣಿನ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ತಾ.ಪಂ.ಸದಸ್ಯೆ ಉಷಾ ಅಂಚನ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕೋವಿಡ್-19 ಸಂದರ್ಭದಲ್ಲಿ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸೌಮ್ಯ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ವೈದ್ಯಾಧಿಕಾರಿ ಡಾ.ಸೌಮ್ಯರವರು ಉತ್ತಮ ರೀತಿಯಲ್ಲಿ ಸ್ಪಂದನೆ ನೀಡಿದ್ದಾರೆ. ಅವರ ಸೇವೆ ಪರಿಗಣಿಸಿ ಆಸ್ಪತ್ರೆಯಲ್ಲಿ ಪರಿಸರ ದಿನಾಚರಣೆ ಆಚರಿಸಿದ್ದೇವೆ. ವೈದ್ಯರ ಗುತ್ತಿಗೆ ಅವಧಿಯೂ ಮುಕ್ತಾಯದ ಹಂತದಲ್ಲಿದ್ದು ಮತ್ತೆ ಅವರನ್ನೇ ಇಲ್ಲಿ ಮುಂದುವರಿಸಬೇಕೆಂದು ಹೇಳಿದರು. ವೈದ್ಯಾಧಿಕಾರಿ ಡಾ.ಸೌಮ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಭಾಗದಲ್ಲಿ ವೈದ್ಯಾಧಿಕಾರಿಯಾಗಿರುವ ಡಾ.ಚೇತನ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಉಪ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.