ಜಿಲ್ಲೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಇಲ್ಲ: ನಳಿನ್ ಕುಮಾರ್ ಕಟೀಲ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಪ್ರಾರಂಭದಲ್ಲಿ ರಾಜ್ಯದಲ್ಲಿ ಆಕ್ಸಿಜನ್, ವೆಂಟಿಲೇಟರ್, ಐಸಿಯು ಬೆಡ್‌ಗಳ ಬಗ್ಗೆ ಚರ್ಚೆಯಾಗುತ್ತಿತ್ತು. ಆದರೆ ಇದೀಗ ಅಂತಹ ಪರಿಸ್ಥಿತಿ ಇಲ್ಲ. ರಾಜ್ಯದಲ್ಲಿ ಎಲ್ಲೂ ಸಮಸ್ಯೆಯಾದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಇವುಗಳ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇಲ್ಲಿ ಸಮರ್ಥವಾಗಿ ನಿರ್ವಹಣೆ ಮಾಡಲಾಗಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶ್ಲಾಘನೆ ವ್ಯಕ್ತಿಪಡಿಸಿದರು.

ಕೆನರಾ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 23 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ 7 ತಾಲೂಕಿನ 9 ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲೆಯಲ್ಲಿಯೇ ನಿಂತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಸಮರ್ಪಕ ಯೋಜನೆ ರೂಪಿಸಿದ್ದು ಹಾಗೂ ಜಿಲ್ಲೆಯ ಶಾಸಕರ ಕ್ರಿಯಾಶೀಲತೆಯ ಕೆಲಸವೇ ಇದಕ್ಕೆ ಕಾರಣ. ಕೊರೋನಾದ ಸಂದರ್ಭ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಗತ್ಯವಿದ್ದ ಆಕ್ಸಿಜನ್, ವೆಂಟಿಲೇಟರ್‌ಗಳನ್ನು ಪೂರೈಸಿ ಉತ್ತಮವಾದ ಸ್ಪಂದನೆ ನೀಡಿವೆ ಎಂದರು.

ವ್ಯಾಕ್ಸಿನೇಷನ್‌ನ ಸಮಸ್ಯೆ ಈಗ ಇಲ್ಲ. ನಿನ್ನೆಯವರೆಗೆ ದೇಶದಲ್ಲಿ 22 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇಡೀ ಜಗತ್ತಿನಲ್ಲಿ ಅತೀ ಹೆಚ್ಚು ಜನರಿಗೆ ಲಸಿಕೆ ನೀಡಿದವರು ನಾವು. ನಮ್ಮ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಿನವಹಿ ಟೈಂ ಟೇಬಲ್ ಮಾಡಿ ಕೊಡುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಖಾಸಗಿ ಆಸ್ಪತ್ರೆಗಳ ಮುಖಾಂತರವಾಗಿ ತಾಲೂಕುಗಳನ್ನು ವಿಂಗಡಣೆ ಮಾಡಿ ಅಲ್ಲಿ ಕೊಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಆದಷ್ಟು ಶೀಘ್ರದಲ್ಲಿ ನಮ್ಮ ಜಿಲ್ಲೆಯ ಎಲ್ಲಾ ವ್ಯಾಕ್ಸಿನೇಷನ್‌ನ ಸಮಸ್ಯೆಯನ್ನು ಪರಿಹರಿಸುವ ಕೆಲಸವಾಗಲಿದೆ. ಲಸಿಕೆಗೆ ದಿನಾಂಕವನ್ನು ಡಬ್ಲ್ಯೂಎಚ್‌ಒನಿಂದ ನಿಗದಿ ಮಾಡುವುದು. ಅದರಂತೆ ಕೋವಿಶೀಲ್ಡ್ ಲಸಿಕೆ ಪಡೆದುಕೊಂಡವರು 90 ದಿನಕ್ಕೆ ಎರಡನೇ ಹಂತದಲ್ಲಿ ಲಸಿಕೆ ಕೊಡಬೇಕೆಂದು ಇದೆ. ಕೋವಾಕ್ಸಿನ್ 70-76 ದಿನಗಳಲ್ಲಿ ಎರಡನೇ ಹಂತದಲ್ಲಿ ಲಸಿಕೆ ಪಡೆಯಬೇಕೆಂದು ಇದೆ. ಇವೆರಡನ್ನೂ ಎರಡನೇ ಹಂತದಲ್ಲಿ ಕೊಡುವ ವ್ಯವಸ್ಥೆ ಆಗಿದೆ. ಯಾರ್‍ಯಾರಿಗೆ ಅವರು ಎರಡನೇ ಹಂತದಲ್ಲಿ ಲಸಿಕೆ ಪಡೆಯಬೇಕೋ ಅದು ಕಂಪ್ಯೂಟರ್‌ನಲ್ಲಿ ಓಪನ್ ಆಗುತ್ತದೆ. ಆಗ ಅವರ ಮೊಬೈಲ್‌ಗೆ ಸಂದೇಶ ಬರುತ್ತದೆ. ಅವರು ಬಂದು ಲಸಿಕೆಯನ್ನು ಪಡೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದ ನಳಿನ್ ಕುಮಾರ್ ಕಟೀಲ್ ಅವರು, ಕೊರೋನಾ ಫ್ರಂಟ್‌ಲೈನ್ ವಾರಿಯರ್ಸ್‌ಗೆ ಮೊದಲು ಲಸಿಕೆ ಕೊಡಬೇಕೆಂದು ಇದೆ. ಈ ನಿಟ್ಟಿನಲ್ಲಿ ಗ್ರಾ.ಪಂ. ಸದಸ್ಯರಿಗೆ ಲಸಿಕೆ ಕೊಡಬೇಕೆಂದು ಇಂದು ಆದೇಶವಾಗಿದ್ದು, ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ನುಡಿದರು.
ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪುತ್ತೂರು ಶಾಸಕ ಸಂಜೀವ ಮಠಂದೂರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.