ಕಡಬ: ಬಿಜೆಪಿ ಸಭೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಆರೋಪ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ನಿಯಮ ಉಲ್ಲಂಘಿಸಿಲ್ಲ, ಕೊರೋನಾ ವಿಚಾರದಲ್ಲಿ ಪ್ರಮುಖರ ಸಭೆ-ಎಸ್.ಅಂಗಾರ

ಕಡಬ: ಇಲ್ಲಿನ ಸರಸ್ವತಿ ವಿದ್ಯಾಲಯದಲ್ಲಿ ಸುಳ್ಯ ಶಾಸಕ ಹಾಗೂ ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಬೃಹತ್ ಬಿಜೆಪಿ ಸಭೆ ನಡೆದಿದ್ದು, ಕೊವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ, ಆದರೆ ಈ ಆರೋಪವನ್ನು ಸಚಿವ ಎಸ್.ಅಂಗಾರ ಅವರು ಅಲ್ಲಗಳೆದಿದ್ದು ಕೊರೋನಾ ವಿಚಾರವಾಗಿ ತುರ್ತು ಪ್ರಮುಖರ ಸಭೆ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಜೂ.6ರಂದು ಕಡಬದ ಸರಸ್ವತೀ ವಿದ್ಯಾಲಯದಲ್ಲಿ ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಸಭೆ ನಡೆಸಿದ್ದು ಈ ಸಭೆಗೆ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವರದಿ ಪ್ರಸಾರವಾಗಿತ್ತು. ಈ ಸಭೆಯು ಖಾಸಗಿಯಾಗಿದ್ದು ಮಾದ್ಯಮದವರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಘಟನೆಯ ಬಗ್ಗೆ ವರದಿಗೆ ತೆರಳಿದ್ದ ವೆಬ್ ಸೈಟ್ ವರದಿಗಾರರು ವೀಡಿಯೋ ಮಾಡುತ್ತಿದ್ದಾಗ ಇದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಆಕ್ಷೇಪವೂ ವ್ಯಕ್ತವಾಗಿ, ಮಾತಿನ ಚಕಮಕಿಯೂ ನಡೆದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.