ಕೊಯಿಲ ಗ್ರಾಮದ ನಿವಾಸಿ ಕುಸುಮಾವತಿ (53ವ.) ಕೋವಿಡ್‌ನಿಂದ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಕೊಯಿಲ ಗ್ರಾಮದ ನೀಲಮೆ ನಿವಾಸಿ ರಾಮಣ್ಣ ಗೌಡ ಎಂಬವರ ಪತ್ನಿ ಕುಸುಮಾವತಿ (53ವ.)ರವರು ಕೋವಿಡ್‌ನಿಂದ ನಿಧನರಾಗಿದ್ದಾರೆ.
ಕುಸುಮಾವತಿಯವರು ಮೇ 22ರಂದು ಅನಾರೋಗ್ಯಕ್ಕೆ ಒಳಗಾಗಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಅಲ್ಲಿ ಮೇ 27ರಂದು ಕೋವಿಡ್ ತಪಾಸಣೆ ವೇಳೆ ಪಾಸಿಟಿವ್ ಬಂದಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮೇ 31ರಂದು ಡಿಸ್ಚಾರ್ಜ್ ಆಗಿ ಮನೆಗೆ ಬಂದು ಚಿಕಿತ್ಸೆಯಲ್ಲಿದ್ದರು. ಜೂ.5ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರು ಆಗಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಕೋವಿಡ್ ನಿಯಮಾವಳಿಯಂತೆ ಜೂ.6ರಂದು ನೀಲಮೆಯಲ್ಲಿ ಮೃತದೇಹದ ಅಂತ್ಯಕ್ರಿಯೆ ನಡೆದಿದೆ. ಕುಸುಮಾವತಿಯವರು ನಾಲ್ಕು ವರ್ಷಗಳಿಂದ ಹೃದಯಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.