ಜೂನ್ 21ರಿಂದ ಎಲ್ಲರಿಗೂ ಉಚಿತ ಲಸಿಕೆ: ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಘೋಷಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನವಾದ ಜೂನ್ ೨೧ರಿಂದ ೧೮ ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಸೋಮವಾರ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉಚಿತವಾಗಿ ನೀಡುವ ಲಸಿಕೆಯಲ್ಲಿ ಶೇ. ೭೫ ಕೇಂದ್ರದ ಪಾಲು ಹಾಗೂ ಶೇ. ೨೫ ರಾಜ್ಯದ ಪಾಲು. ರಾಜ್ಯ ಸರಕಾರಗಳ ಪಾಲಿನ ಲಸಿಕೆಯನ್ನು ಕೇಂದ್ರ ಸರಕಾರವೇ ಖರೀದಿಸಿ, ಆಯಾ ರಾಜ್ಯಗಳಿಗೆ ಉಚಿತವಾಗಿ ನೀಡಲಿದೆ. ಶೇ. ೨೫ರಷ್ಟು ಲಸಿಕೆ ಖರೀದಿಗೆ ಖಾಸಗಿ ಆಸ್ಪತ್ರೆಗಳಿಗೆ ನೀಡಲಾಗಿರುವ ಅವಕಾಶ ಮುಂದುವರಿಯಲಿದೆ. ಆದರೆ, ಅವರು ಗರಿಷ್ಠ ೧೫೦ ರೂ. ಸೇವಾ ಶುಲ್ಕ ತೆಗೆದುಕೊಂಡು, ಲಸಿಕೆಯನ್ನು ನೀಡಬಹುದು. ಸಾಮರ್ಥ್ಯವಿದ್ದವರು ಲಸಿಕೆ ಖರೀದಿಸಲೂ ಈ ಮೂಲಕ ಅವಕಾಶ ನೀಡಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಇಂದು, ದೇಶದಲ್ಲಿ ೭ ಕಂಪೆನಿಗಳು ವಿಭಿನ್ನ ರೀತಿಯ ಲಸಿಕೆಗಳನ್ನು ಉತ್ಪಾದಿಸಲು ಆರಂಭಿಸಿವೆ. ಬೇರೆ ದೇಶಗಳಿಂದಲೂ ಲಸಿಕೆ ಖರೀದಿ ಪ್ರಕ್ರಿಯೆಗಳಿಗೆ ವೇಗ ನೀಡಲಾಗಿದೆ. ಮೂಗಿನ ಮೂಲಕ ಸಿಂಪಡಿಸಲಾಗುವ ಲಸಿಕೆಯ ಪ್ರಯೋಗವೂ ನಡೆಯುತ್ತಿದೆ. ಇದಕ್ಕೆ ಯಶಸ್ಸು ಸಿಕ್ಕಿದರೆ, ಭಾರತದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ಸಿಗುತ್ತದೆ ಎಂದು ಮೋದಿ ಹೇಳಿದರು.

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯಗಳು ಅನ್‌ಲಾಕ್ ಪ್ರಕ್ರಿಯ ಆರಂಭಿಸಿವೆ. ಇಂಥ ಸಂದರ್ಭದಲ್ಲಿ ಲಸಿಕೆಯೇ ರಕ್ಷಣೆಗೆ ಪ್ರಮುಖ ಅಸ್ತ್ರವಾಗಿದೆ. ಮುಂದಿನ ದಿನಗಳಲ್ಲಿ ಲಸಿಕೆ ಪೂರೈಕೆ ಪ್ರಕ್ರಿಯೆ ಇನ್ನಷ್ಟು ವೇಗ ಪಡೆದುಕೊಳ್ಳಲಿದೆ. ಭಾರತದಂತಹ ದೊಡ್ಡ ದೇಶದಲ್ಲಿ ಲಸಿಕೆ ನೀಡಿಕೆ ಅಭಿಯಾನ ಸವಾಲಿನಿಂದ ಕೂಡಿದೆ. ಎಲ್ಲರಿಗೂ ಉಚಿತ ಲಸಿಕೆ ನೀಡುವ ನಿಟ್ಟಿನಲ್ಲಿ ದೇಶವು ಮುನ್ನಡೆಯುತ್ತಿದ್ದಾಗ ಹಲವು ಪ್ರಶ್ನೆಗಳು ಎದುರಾದವು ಎಂದು ಮೋದಿ ಹೇಳಿದರು.

ಲಸಿಕಾ ವಿತರಣೆಯನ್ನು ವಿಕೇಂದ್ರಿಕರಿಸಬೇಕು. ಕೇಂದ್ರವೇ ಯಾಕೆ ಇದನ್ನು ನಿರ್ಧರಿಸಬೇಕು ಎಂಬ ಪ್ರಶ್ನೆಗಳನ್ನು ಕೆಲ ರಾಜ್ಯ ಸರಕಾರಗಳು ಪ್ರಶ್ನಿಸಿದ್ದವು. ಇದರ ಜೊತೆಗೆ ವೃದ್ಧರಿಗೆ ಯಾಕೆ ಮೊದಲು ಲಸಿಕೆ ನೀಡಬೇಕು? ಎಲ್ಲ ವರ್ಗದವರಿಗೆ ಯಾಕೆ ಕೊಡುತ್ತಿಲ್ಲ ಎಂಬ ಪ್ರಶ್ನೆಗಳು ಕೇಳಿಬಂದವು. ಈ ಎಲ್ಲಾ ಬೇಡಿಕೆಗಳನ್ನು ಗಮನದಲ್ಲಿರಿಸಿಕೊಂಡು, ಶೇ. ೨೫ರಷ್ಟು ಲಸಿಕೆ ನೀಡಿಕೆ ಕೆಲಸವನ್ನು ಅವರಿಗೇ ನೀಡುವುದೆಂದು ತೀರ್ಮಾನಿಸಲಾಯಿತು. ಇದು ಮೇ ೧ರಿಂದ ಜಾರಿಗೆ ಬಂದಿತು. ಲಸಿಕೆ ವಿತರಣೆ ಕಾರ್ಯ ಬಹು ದೊಡ್ಡ ಕಾರ್ಯ. ಇಷ್ಟು ದೊಡ್ಡ ಕಾರ್ಯದಲ್ಲಿ ಏನೆಲ್ಲ ಕಷ್ಟ ಇದೆ ಎಂಬುದು ರಾಜ್ಯಗಳಿಗೂ ಇಂದು ತಿಳಿಯತೊಡಗಿದೆ. ಬಳಿಕ ಲಸಿಕೆಗಾಗಿ ಜನರ ಸರದಿ ಹೆಚ್ಚತೊಡಗಿತು. ಇದರಿಂದ ಲಸಿಕೆ ವಿತರಣೆ ಕೆಲಸವನ್ನು ರಾಜ್ಯಗಳಿಗೆ ಬಿಡಬೇಕು ಎಂದು ಹೇಳಿದವರ ಮಾತು ಬದಲಾಗತೊಡಗಿತು. ಇದರಿಂದಾಗಿ, ಮೇ ೧ರಿಂದ ಹಿಂದಿನ ವ್ಯವಸ್ಥೆಯನ್ನೇ ಮರುಸ್ಥಾಪಿಸಲಾಯಿತು. ಲಸಿಕಾಕರಣದ ರಾಜ್ಯಗಳ ಶೇ. ೨೫ ಭಾಗವನ್ನೂ ಕೇಂದ್ರ ಸರಕಾರವೇ ವಹಿಸಿಕೊಂಡಿತು. ಮುಂದಿನ ಎರಡು ವಾರಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹೊಸ ಮಾರ್ಗಸೂಚಿ ಅನುಸರಿಸಬೇಕಿದೆ ಎಂದು ಹೇಳಿದರು.

ಮಕ್ಕಳಿಗೂ ಲಸಿಕೆ ತಯಾರಿ: ಕೋವಿಡ್ -೧೯ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹಾನಿಯಾಗಲಿದೆ ಎಂಬ ತಜ್ಞರ ಹೇಳಿಕೆಯಿಂದ ಜನರು ಆತಂಕಪಡುವ ಅಗತ್ಯವಿಲ್ಲ. ಅದಕ್ಕಾಗಿಯೇ ಮಕ್ಕಳಿಗಾಗಿ ಲಸಿಕೆ ತಯಾರಿಸಲಾಗುತ್ತಿದ್ದು, ಪ್ರಯೋಗದ ಹಂತದಲ್ಲಿವೆ. ಒಂದು ನೇಸಲ್ ಲಸಿಕೆ ಕುರಿತು ಸಂಶೋಧನೆ ನಡೆಯುತ್ತಿದೆ. ಇದು ಮೂಗಿನಲ್ಲಿ ಸ್ಪ್ರೇ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಇದರಲ್ಲಿ ಸಫಲತೆ ದೊರೆತರೆ ಅದು ಲಸಿಕಾ ಅಭಿಯಾನಕ್ಕೆ ವೇಗ ನೀಡಲಿದೆ ಎಂದರು. ಇಷ್ಟು ಕಡಿಮೆ ಸಮಯದಲ್ಲಿ ಲಸಿಕೆ ತಯಾರಿಸುವುದು ಮಾನವತೆಗೆ ಒಂದು ದೊಡ್ಡ ಕೊಡುಗೆಯಾಗಿದೆ.ಅದಕ್ಕೆ ಅದರ ಮಿತಿ ಕೂಡ ಇದೆ. ಲಸಿಕೆ ತಯಾರಿಸಿದ ನಂತರ ಕೂಡ ದೇಶದ ಅತ್ಯಂತ ಕಡಿಮೆ ದೇಶಗಳಲ್ಲಿ ಲಸಿಕೀಕರಣ ಆರಂಭವಾಗಿದೆ. ಡಬ್ಲ್ಯುಎಚ್‌ಒ ಈ ಸಂಬಂಧ ಮಾರ್ಗಸೂಚಿ ಕೂಡ ನೀಡಿದೆ. ಲಸಿಕೆಯ ಒಂದು ಡೋಸ್ ಕೂಡ ಎಷ್ಟು ಮಹತ್ವ ಎಂಬುದನ್ನು ನಾವು ಅರಿತಿದ್ದೇವೆ. ಪ್ರತಿ ಡೋಸ್‌ನೊಂದಿಗೆ ಒಂದು ಜೀವ ಉಳಿಯಬಹುದು ಎಂದರು.

ಅಪಪ್ರಚಾರ ನಂಬಬೇಡಿ: ಲಸಿಕೆ ಕುರಿತು ರಾಜಕೀಯ ಹೇಳಿಕೆಗಳನ್ನು ಯಾರೂ ಮೆಚ್ಚುವುದಿಲ್ಲ. ಲಸಿಕೆ ಕುರಿತು ಕೆಲವರು ಹುಟ್ಟಿಸುವ ಭ್ರಮೆ, ಅಪಪ್ರಚಾರಗಳು ಚಿಂತೆಗೀಡು ಮಾಡುತ್ತಿವೆ.ಲಸಿಕೆ ಕುರಿತು ದೇಶದಲ್ಲಿ ಕೆಲಸ ಆರಂಭಿಸಿದಾಗಿಲಿನಿಂದ ಆ ಕುರಿತು ಜನರಲ್ಲಿ ಶಂಕೆ ಉತ್ಪನ್ನ ಮಾಡುವ ಹೇಳಿಕೆಗಳನ್ನು ನೀಡಲಾಗುತ್ತಿದೆ. ಲಸಿಕೆ ಹಾಕದಂತೆ ತರ್ಕ ವಿತರ್ಕ ಮಾಡಲಾಯಿತು. ಅದನ್ನು ದೇಶ ನೋಡುತ್ತಿದೆ.ಯುವಕರು ಇಂತಹ ಹೇಳಿಕೆಗಳನ್ನು ನಂಬಬಾರದು. ಜಾಗೃತಿ ಮೂಡಿಸಲು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ದೀಪಾವಳಿವರೆಗೆ ಉಚಿತ ಪಡಿತರ
ಕಳೆದ ಏಪ್ರಿಲ್‌ನಲ್ಲಿ ಘೋಷಣೆಯಾದ ಲಾಕ್‌ಡೌನ್ ಅವಧಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ, ಬಡಜನರಿಗೆ ಉಚಿತ ಪಡಿತರ ವಿತರಿಸುವ ಪ್ರಧಾನ ಮಂತ್ರಿ ಗರೀಬ್ ಅನ್ನ ಯೋಜನೆಯನ್ನು ದೀಪಾವಳಿವರೆಗೆ ಅಂದರೆ, ನವೆಂಬರ್ ತಿಂಗಳವರೆಗೆ ವಿಸ್ತರಿಸಲಾಗುವುದು. ಈ ಯೋಜನೆಯಡಿ ಬಡಜನರಿಗೆ ಪ್ರತಿ ತಿಂಗಳು ಉಚಿತ ಪಡಿತರ ದೊರೆಯಲಿದೆ ಎಂದರು. ಕಳೆದ ವರ್ಷ ಏಪ್ರಿಲ್, ಮೇ ತಿಂಗಳಿಗಾಗಿ ಆರಂಭಿಸಲಾಗಿದ್ದ ಈ ಯೋಜನೆಯನ್ನು ನಂತರ ವಿಸ್ತರಿಸಲಾಗಿತ್ತು. ಮಹಾಮಾರಿಯ ಸಮಯದಲ್ಲಿ ಸರ್ಕಾರ ಬಡವರ ಜೊತೆಗಿದೆ.ಯಾವುದೇ ಬಡ ಸಹೋದರರು ಹಸಿವಿನಿಂದ ಮಲಗಬಾರದು ಎಂಬುದು ಇದರ ಉದ್ದೇಶ ಎಂದು ಹೇಳಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.