ಪುಣಚ: ಕೋವಿಡ್ ಕಾರ್ಯಪಡೆ ಪರಿಶೀಲನಾ ಸಭೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನ ಕೋವಿಡ್ ಕಾರ್ಯಪಡೆಯ ಪರಿಶೀಲನಾ ಸಭೆಯು ಜೂ.07ರಂದು ಪುಣಚ ಗ್ರಾಪಂ ಅಧ್ಯಕ್ಷ ರಾಮಕೃಷ್ಣ ಬಿ.ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಆಯಿಷತ್ ರಂಸೀಲಾ ಮಾಹಿತಿ ನೀಡಿದರು. ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಪ್ರತಿಭಾ ಜಗನ್ನಾಥ್, ಕಾರ್ಯದರ್ಶಿ ರಾಮ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಪಂ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಕೋವಿಡ್ ಕಾರ್ಯಪಡೆಯಲ್ಲಿ ಸೇವೆಗೈಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಸಂದರ್ಭದಲ್ಲಿ ಆಹಾರ ಕಿಟ್ ವಿತರಿಸಲಾಯಿತು. ಉದ್ಯಮಿ ಪ್ರೀತಮ್ ಪೂಂಜಾರವರು ಅಂಗನವಾಡಿ ಕಾರ್ಯಕರ್ತೆಯರಿಗೆ ಅಕ್ಕಿ ಮತ್ತು ಕೊಡೆಯನ್ನು ಕೊಡುಗೆಯಾಗಿ ನೀಡಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಲಾವಣ್ಯ ಪಿ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.