ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್‌ನಿಂದ ಜನಾಂದೋಲನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ವೈದ್ಯಕೀಯ ಶಿಕ್ಷಣ ಕ್ಷೇತ್ರದ ಕಾರ್ಪೊರೇಟ್ ಮಾಫಿಯಾ ವಿರುದ್ಧ ಹೋರಾಟ-ಸವಾದ್ ಕಲ್ಲರ್ಪೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮೆಡಿಕಲ್ ಮಾಫಿಯಾದ ಪ್ರಕರಣ ಇಂದು ನಿನ್ನೆಯ ಘಟನೆಯಲ್ಲ, ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಕೇಳಿ ಬರುತ್ತಿರುವ ವೈದ್ಯಕೀಯ ಕ್ಷೇತ್ರದ ಕಾರ್ಪೊರೇಟ್ ಮಾಫಿಯಾವಾಗಿದೆ. ಜಿಲ್ಲೆಯ ಜನ ಸಾಮಾನ್ಯರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಗಳಿಗೆ ತೆರಳಲು ಭಯ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣವೆಂಬುವುದು ಕನಸು ಮಾತ್ರ ಎನ್ನುವಂತಹ ಪರಿಸ್ಥಿತಿಯಿದೆ. ಈ ಪರಿಸ್ಥಿತಿಯನ್ನು ಜನಾಂದೋಲನದ ಮೂಲಕ ಬದಲಾವಣೆಗೊಳಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ ಹೇಳಿದರು. ಜೂ.೯ರಂದು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯನ್ನು ಗಮನಿಸಿ ನೋಡಿದರೆ ವೈದ್ಯಕೀಯ ಖಾಸಗೀಕರಣ ಹೆಚ್ಚಾಗಿದ್ದು ಮಂಗಳೂರಿನ ಹೆಸರಾಂತ ಎಲ್ಲಾ ಮೆಡಿಕಲ್ ಕಾಲೇಜುಗಳು ಹಾಗೂ ಆಸ್ಪತ್ರೆಗಳನ್ನು ಕಾರ್ಪೊರೇಟರ್ ವ್ಯಕ್ತಿಗಳು ಮುನ್ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಂದು ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಿಲ್ಲ, ಸರಕಾರಿ ಮೆಡಿಕಲ್ ಕಾಲೇಜುಗಳಿಲ್ಲ ಇದರಿಂದಾಗಿ ಹಲವಾರು ವಿದ್ಯಾರ್ಥಿಗಳು ವೈದ್ಯರಾಗಬೇಕೆಂಬ ಕನಸು, ವೈದ್ಯಕೀಯ ಶಿಕ್ಷಣದಲ್ಲಿ ಪದವಿ ಪಡೆಯಬೇಕೆಂಬ ಕನಸು ಕನಸಾಗಿಯೇ ಉಳಿದಿದೆ. ಯಾಕಾಗಿ ಇಲ್ಲಿನ ಜಿಲ್ಲಾಧಿಕಾರಿಗಳು ಹಾಗೂ ಸರ್ಕಾರವು ಹಲವು ವರ್ಷಗಳ ಬೇಡಿಕೆಯಾದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವುದರ ಬಗ್ಗೆ ಮತ್ತು ಸರ್ಕಾರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದರ ಬಗ್ಗೆ ಯಾಕೆ ಮುತುವರ್ಜಿ ವಹಿಸುವುದಿಲ್ಲ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದೆ. ಪುತ್ತೂರು ತಾಲೂಕಿನಲ್ಲಿ ಮೆಡಿಕಲ್ ಕಾಲೇಜಿಗಾಗಿ ಕಾಯ್ದಿರಿಸಿದ ಸ್ಥಳದಲ್ಲಿ ಕೆಲವೊಂದು ಕಾಣದ ಕೈಗಳ ,ಕಾರ್ಪೊರೇಟ್ ಕುಳಗಳ ಕುಮ್ಮಕ್ಕಿನಿಂದ ಸೀ ಫುಡ್ ಪಾರ್ಕ್ ನಿರ್ಮಿಸಲು ಮುಂದಾದಾಗ ಕ್ಯಾಂಪಸ್ ಫ್ರಂಟ್‌ನ ಹೋರಾಟದಿಂದ ನಿರ್ಣಯವನ್ನು ಹಿಂಪಡೆಯಲು ಸಾಧ್ಯವಾಯಿತು. ಆದರೆ ಆ ಸ್ಥಳದಲ್ಲಿ ಇನ್ನೂ ಕೂಡ ಮೆಡಿಕಲ್ ಕಾಲೇಜು ಸ್ಥಾಪನೆಯ ಬಗ್ಗೆ ಸರಕಾರ ಮುತುವರ್ಜಿ ವಹಿಸುತ್ತಿಲ್ಲ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಮೆಡಿಕಲ್ ಕಾರ್ಪೊರೇಟ್ ಮಾಫಿಯಾ ಹೇರಳವಾಗಿದ್ದು, ಜನ ಸಾಮಾನ್ಯರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗಳು ಜಿಲ್ಲೆಯಲ್ಲಿ ನಿಲ್ಲಬೇಕಿದ್ದರೆ ಕಾರ್ಪೊರೇಟ್ ಮಾಫಿಯಾವನ್ನು ನಿಲ್ಲಿಸಬೇಕು ಹಾಗೂ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹಿಸಿ ಜನಾಂದೋಲನದ ಅವಶ್ಯಕತೆಯಿದೆ. ಕ್ಯಾಂಪಸ್ ಫ್ರಂಟ್ ಈ ಜನಾಂದೋಲನವನ್ನು ಜಿಲ್ಲೆಯಲ್ಲಿ ಕ್ರಾಂತಿಕಾರಿ ಹೋರಾಟವಾಗಿ ಮುಂದಿನ ದಿನಗಳಲ್ಲಿ ನಡೆಸಲಿಕ್ಕಿದೆ ಎಂದು ಸವಾದ್ ಕಲ್ಲರ್ಪೆ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಎಫ್‌ಐ ಮುಖಂಡರಾದ ಸಿರಾಜ್ ಮಂಗಳೂರು, ಅರ್ಫೀದ್ ಅಡ್ಕಾರ್, ಇನಾಯತ್ ಮಂಗಳೂರು, ಸರಫುದ್ದೀನ್ ಮಂಗಳೂರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.