ಹವಾಮಾನ ಆಧಾರಿತ ಬೆಳೆ ವಿಮಾ ಕಂತು ಪಾವತಿಸಲು ಜೂ.30 ಅಂತಿಮ ದಿನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ (WBCIS)) ಕಾರ್ಯಕ್ರಮವನ್ನು ೨೦೨೧ರ ಮುಂಗಾರು ಹಂಗಾಮಿಗೆ ಅನ್ವಯಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಸರಕಾರ ಅಧಿಸೂಚನೆ ಹೊರಡಿಸಿದೆ.

ಈ ಯೋಜನೆಯು ಕೇಂದ್ರ ಸರಕಾರ ನೀಡಿರುವ ಮಾನದಂಡಗಳ ಆಧಾರದಲ್ಲಿ ಅಧಿಸೂಚಿತ ತೋಟಗಾರಿಕೆ ಬೆಳೆಗಳನ್ನು ಬೆಳೆದ ರೈತರಿಗೆ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಉಂಟಾದಲ್ಲಿ ವಿಮಾ ನಷ್ಟ ಪರಿಹಾರವನ್ನು ಪಡೆಯಲು ಅವಕಾಶವನ್ನು ಕಲ್ಪಿಸುತ್ತದೆ. ಮುಂಗಾರು ಹಂಗಾಮಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನಗರ ಸ್ಥಳೀಯಾಡಳಿತ ಸಂಸ್ಥೆ ಹಾಗೂ ಎಲ್ಲಾ ೨೩೧ ಗ್ರಾಮ ಪಂಚಾಯತ್‌ಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಮತ್ತು ಕರಿಮೆಣಸು ಬೆಳೆಗಳನ್ನು ಅಧಿಸೂಚಿಸಿ ಆದೇಶ ಹೊರಡಿಸಲಾಗಿದ್ದು ೨೦೨೧ರ ಮುಂಗಾರು ಹಂಗಾಮಿಗೆ ಸಂಬಂಧಿಸಿ ವಿಮಾ ಕಂತು ಪಾವತಿಸಲು ಜೂ.೩೦ ಅಂತಿಮ ದಿನವಾಗಿರುತ್ತದೆ. ಅಧಿಸೂಚಿತ ಬೆಳೆಗಳಿಗೆ ಬ್ಯಾಂಕ್‌ಗಳಿಂದ (ರಾಷ್ಟ್ರೀಕೃತ ಬ್ಯಾಂಕ್/ ಖಾಸಗಿ/ ಸಹಕಾರಿ ಬ್ಯಾಂಕ್‌ಗಳು) ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಐಚ್ಚಿಕವಾಗಿರುತ್ತದೆ. ಈ ಯೋಜನೆಯಡಿ ತೋಟಗಾರಿಕೆ ರೈತರು ಅಧಿಸೂಚಿತ ಬೆಳೆಗಳಿಗೆ ಸಂಬಂಧಿಸಿ ಸಾಲ ಪಡೆದುಕೊಂಡಿರುವ ಬ್ಯಾಂಕ್‌ಗಳ ಮೂಲಕ ಹಾಗೂ ಸಾಲ ಪಡೆಯದಿರುವ ರೈತರು ಉಳಿತಾಯ ಖಾತೆಯನ್ನು ಹೊಂದಿರುವ ಬ್ಯಾಂಕ್‌ಗಳ ಮೂಲಕ ವಿಮಾ ಕಂತುಗಳನ್ನು ಪಾವತಿಸಿ ಯೋಜನೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತೋಟಗಾರಿಕಾ ಉಪನಿರ್ದೇಶಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.