ನಗರಸಭೆ ಅಧ್ಯಕ್ಷರು, ಪೌರಾಯುಕ್ತರು, ತಹಶೀಲ್ದಾರ್‌ರಿಂದ ಪರಿಶೀಲನೆ: ವಿವಿಧ ಸಂಸ್ಥೆಗಳಲ್ಲಿನ ಕೊರೋನಾ ಸೋಂಕಿತರನ್ನು ಕೋವಿಡ್‌ಕೇರ್ ಸೆಂಟರ್ ಶಿಫ್ಟ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ಸೋಂಕು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ತಾಲೂಕಿನ ವಿವಿಧ ಕಡೆಯಲ್ಲಿನ ಸಂಸ್ಥೆಗಳ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿತ್ತು. ಕೋವಿಡ್ ಪಾಸಿಟಿವ್ ಬಂದಲ್ಲಿ ಅವರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವ ಕಾರ್ಯ ನಡೆಯುತ್ತಿದ್ದು, ಜೂ.10ರಂದು ನಗರಸಭೆ ವ್ಯಾಪ್ತಿಯಲ್ಲಿ ನಗರಸಭೆ ಅಧ್ಯಕ್ಷರು, ಪೌರಾಯುಕ್ತರು, ತಹಶೀಲ್ದಾರ್ ಅವರು ಪರಿಶೀಲನೆ ನಡೆಸಿ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿದರು.

 

ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ತಹಶೀಲ್ದಾರ್ ರಮೇಶ್ ಬಾಬು, ಪೌರಾಯುಕ್ತ ಮಧು ಎಸ್.ಎಮ್ ಅವರ 13 ಪುತ್ತೂರು ನೆಹರುನಗರ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದರು. ಅಲ್ಲಿನ ೨೫೭ ಮಂದಿ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ನಡೆಸಿ ಈ ಪೈಕಿ 13 ಮಂದಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದ್ದರಿಂದ ೭ ಮಂದಿಯನ್ನು ನಿನ್ನೆ ಮತ್ತು ಉಳಿದ 6 ಮಂದಿಯನ್ನು ಜೂ.10ರಂದು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗಿದೆ. ಸೋಂಕಿತರಿಗೆ ಸಂಸ್ಥೆಯ ಒಳಗಡೆ ಪ್ರತ್ಯೇಕ ಮನೆಯಲ್ಲಿ ಉಳಿದು ಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಹೆಚ್ಚಿನ ಸುರಕ್ಷತೆಯ ದೃಷ್ಟಿಯಿಂದ ಅವರನ್ನು ಬಲ್ನಾಡಿನ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗಿದೆ. ನಗರಸಭೆ ಸದಸ್ಯ ಶಿವರಾಮ ಸಪಲ್ಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಸುಹೈಲಾ, ನಗರ ಸಭೆ ಆರೋಗ್ಯ ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ ಮತ್ತು ಸಿಬ್ಬಂದಿಗಳು ಜೊತೆಗಿದ್ದರು. 

ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳ ಕೋವಿಡ್ ಪರೀಕ್ಷೆ:
ಅಧಿಕ ಮಂದಿ ಸೇರಿಕೊಂಡು ಕೆಲಸ ನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿರುವ ಸಿಬ್ಬಂದಗಿಳ ಕೋವಿಡ್ ಪರೀಕ್ಷೆ ಮಾಡುವ ಕಾರ್ಯ ಮುಂದುವರಿದಿದೆ. ಈ ಸಂದರ್ಭದಲ್ಲಿ ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.