ಕಡಬದ ಮುಜೂರುನಲ್ಲಿ ಸಹೋದರ ಧ್ರುವನಿಗೆ ಲಾಂಗ್ ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಪ್ರಕರಣದ ಆರೋಪಿ ಪ್ರೀತಂಗೆ ನಿರೀಕ್ಷಣಾ ಜಾಮೀನು ಮಂಜೂರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಡಬ ತಾಲೂಕಿನ ಮುಜೂರು ಎಂಬಲ್ಲಿ ಸಹೋದರ ಧ್ರುವನಿಗೆ ಲಾಂಗ್ ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಪ್ರಕರಣದ ಆರೋಪಿ ಪ್ರೀತಂ ಎಂಬವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್ ಫಿರೇರಾರವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

ಐತ್ತೂರು ಗ್ರಾಮದ ಮುಜೂರು ಎಂಬಲ್ಲಿನ ಬಾಳಪ್ಪ ಗೌಡ ಎಂಬವರ ಪುತ್ರರಾದ ಧ್ರುವ ಹಾಗೂ ಪ್ರೀತಂ ಎಂಬವರ ಮಧ್ಯೆ ಜಾಗದ ವಿಚಾರಕ್ಕೆ ಸಂಬಂಧಿಸಿ ಮನಸ್ತಾಪ ಇತ್ತು ಎನ್ನಲಾಗಿದ್ದು, ಮೇ ೧೪ರ ರಾತ್ರಿ ಪ್ರೀತಂರವರು ಧ್ರುವ ಅವರಿಗೆ ಲಾಂಗ್‌ನಿಂದ ಕಡಿದು ಲಾಂಗನ್ನು ಅಲ್ಲೇ ಬಿಸಾಡಿ, ಇನ್ನು ಮುಂದಕ್ಕೆ ನಾನು ಮದ್ಯ ಸೇವಿಸಿ ಗಲಾಟೆ ಮಾಡುತ್ತಿರುವುದಾಗಿ ನೀನು ಅಪಪ್ರಚಾರ ಮಾಡಿದರೆ ನಿನ್ನನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೇಸು ದಾಖಲಾಗಿತ್ತು. ತೀವ್ರ ಸ್ವರೂಪದ ಗಾಯವಾಗಿದ್ದ ಧ್ರುವರವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ ೧೪ರಂದು ಧ್ರುವರವರು ಪ್ರೀತಂರವರ ವಿರುದ್ಧ ಕಡಬ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಅದರಂತೆ ಪೊಲೀಸರು ಆರೋಪಿ ಪ್ರೀತಮ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ ೪೪೭, ೫೦೪, ೩೨೬, ೫೦೬ರನ್ವಯ ಪ್ರಕರಣ ದಾಖಲಿಸಿದ್ದರು.
ಬಳಿಕ ಆರೋಪಿ ಪ್ರೀತಂ ರವರು ತನ್ನ ಪರ ವಕೀಲರಾದ ಮಹೇಶ್ ಕಜೆಯವರ ಮುಖಾಂತರ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಈ ಘಟನೆಯು ನಡೆದಿದೆ ಎಂಬುವುದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ. ಆರೋಪಿಯು ಹಲ್ಲೆ, ಕೊಲೆಗೆ ಯತ್ನಿಸಿದ್ದಾರೆ ಎಂಬುವುದಕ್ಕೆ ಸಂಬಂಧಿಸಿದಂತೆ ಯಾವುದೇ ಪೂರಕವಾದ ಸಾಕ್ಷ್ಯಾಧಾರಗಳು ಲಭ್ಯವಿರುವುದಿಲ್ಲ, ಎಂಬಿತ್ಯಾದಿ ಅಂಶಗಳ ಬಗ್ಗೆ ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದರು. ಸರಕಾರಿ ಅಭಿಯೋಜಕರು ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಶರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.