ದ.ಕ.ಜಿಲ್ಲೆಯಲ್ಲಿ ಜೂ. 20ರವರೆಗೆ ಲಾಕ್‌ಡೌನ್ ವಿಸ್ತರಣೆ-ಸಿಎಂ ಘೋಷಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಮಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಇಳಿಕೆಯಾದ ಕಾರಣ ರಾಜ್ಯದ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್ ಮುಂದುವರೆಸಲು ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.2೦ರವರೆಗೆ ಲಾಕ್‌ಡೌನ್ ಮುಂದುವರೆಸಲಾಗಿದೆ. ಜಿಲ್ಲಾಡಳಿತಗಳ ಡಿಸಿಗಳ ಜೊತೆ ನಡೆಸಿದ ಸಭೆಯಲ್ಲಿ ಸಿಎಂ ಬಿಎಸ್‌ವೈ ಒಂದು ವಾರ ಲಾಕ್‌ಡೌನ್ ಮುಂದುವರೆಸಲು ಸೂಚಿಸಿದ್ದಾರೆ. ಲಾಕ್‌ಡೌನ್ ಜತೆಗೆ ಏನು ವಿನಾಯಿತಿ ನೀಡಬೇಕಾಗಿದೆ. ಈ ಬಗ್ಗೆ ನೀವೇ ಚರ್ಚೆ ಮಾಡಿ ತಿಳಿಸಿ ಎಂದು ಸಿಎಂ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳ ಪ್ರಮಾಣ ಹೆಚ್ಚುತ್ತಲ್ಲೆ ಇದ್ದು, ಪಾಸಿಟಿವಿಟಿ ದರವನ್ನು ಕನಿಷ್ಟ ಮಟ್ಟಕ್ಕೆ ಇಳಿಸುವ ದೃಷ್ಟಿಯಿಂದ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತವಾರಿ ಸಚಿವರೂ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡುವಂತೆ ಒಲವು ತೋರಿದ್ದು, ಎಲ್ಲರ ಅಭಿಪ್ರಾಯ ಪರಿಗಣಿಸಿ ಸೋಂಕು ನಿಯಂತ್ರಣ ಮಾಡುವ ದೃಷ್ಟಿಯಿಂದ ಜೂ.2೦ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.