ಗೃಹರಕ್ಷಕ ಸಿಬ್ಬಂದಿ ಕುಸುಮಾ ಭಟ್‌ರವರ ಕರ್ತವ್ಯ ನಿಷ್ಠೆಗೆ ಪ್ರಶಂಸಾ ಪತ್ರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಡಬ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಲಂಕಾರು ನಿವಾಸಿ ಕುಸುಮಾ ಭಟ್ ರವರಿಗೆ ಪುತ್ತೂರು ಉಪವಿಭಾಗ ಪೊಲೀಸ್ ಉಪಅಧೀಕ್ಷಕಿ ಡಾ.ಗಾನ ಪಿ.ಕುಮಾರ್ ರವರು ಪ್ರಶಂಸಾ ಪತ್ರ ನೀಡಿ ಗೌರವಿಸಿದ್ದಾರೆ. ಇವರ ಕರ್ತವ್ಯ ನಿಷ್ಠೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಜೂ.2ರಂದು ಬಂಟ್ವಾಳ ತಾಲೂಕಿನ ಪೆರಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನಿಗೆ ಹಲ್ಲೆ ನಡೆಸಿದ ಹಲ್ಲೆಕೋರರು ತಪ್ಪಿಸಿಕೊಳ್ಳುವ ಉದ್ಧೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಉಪ್ಪಿನಂಗಡಿ ಕಡೆಗೆ ಬಂದು ನೆಕ್ಕಿಲಾಡಿಯ ಚೆಕ್‌ಪಾಂಟ್ ನಲ್ಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾರನ್ನು ನಿಲ್ಲಿಸದೆ ಪುತ್ತೂರು ರಸ್ತೆಯಲ್ಲಿ ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ನೆಲ್ಲಿಲಾಡಿಯ ಚೆಕ್‌ಪಾಂಟ್‌ನಲ್ಲಿ ಪೊಲೀಸರ ಜೊತೆ ಕರ್ತವ್ಯದಲ್ಲಿದ್ದ ಕುಸುಮಾರವರು ಹಲ್ಲೆಕೋರರ ಕಾರಿನ ನೋಂದಣಿ ಸಂಖ್ಯೆಯನ್ನು ಗುರುತಿಸಿ ಕ್ಲಪ್ತ ಸಮಯದಲ್ಲಿ ಅಧಿಕಾರಿಗಳಿಗೆ ತಿಳಿಸಿದ್ದರು. ಅದರ ಆಧಾರದಲ್ಲಿ ಪುತ್ತೂರಿನ ಕೆಮ್ಮಾಯಿಯಲ್ಲಿ ಪೊಲೀಸರು ಕಾರನ್ನು ತಡೆದು ಹಲ್ಲೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ಪ್ರಕರಣದಲ್ಲಿ ಕುಸುಮಾರವರ ಸಮಯ ಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಗುರುತಿಸಿದ ಡಾ.ಗಾನ ಪಿ.ಕುಮಾರ್ ರವರು ಕುಸುಮಾರವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.