ದ.ಕ.ಹಾಗೂ ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದಿಂದ ದ.ಕ. ಜಿಲ್ಲಾಧಿಕಾರಿಗಳಿಗೆ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ರವರು ಜೂ. 11 ರಂದು ಪತ್ರಿಕಾ ಮಾಧ್ಯಮದಲ್ಲಿ ಖಾಸಗಿ ಶಾಲೆಗಳ ಬಗ್ಗೆ ನೀಡಿದ ಹೇಳಿಕೆಯನ್ನು ಮರುಪರಿಶೀಲಿಸಬೇಕು ಎಂದು ದ.ಕ ಹಾಗೂ ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ವತಿಯಿಂದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ವಿವರಿಸಿ, ತಿಳಿಸಲಾಯಿತು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿರವರು ನೀವು ಮನವಿಯಲ್ಲಿ ತಿಳಿಸಿರುವ ಅಂಶಗಳು ಸರಿ ಇದೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ದ. ಕ ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕೋಶಾಧಿಕಾರಿ ಸೀತಾರಾಮ ರೈ ಸವಣೂರು, ಉಪಾಧ್ಯಕ್ಷ ಮುಸಬ್ಬ. ಪಿ. ಬ್ಯಾರಿ, ಕಾರ್ಯದರ್ಶಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಜತೆ ಕಾರ್ಯದರ್ಶಿ ಜಯಸೂರ್ಯ ರೈ, ಅಶ್ವಿನ್ ಶೆಟ್ಟಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.