HomePage_Banner
HomePage_Banner

ಹೇಮನಾಥ ಶೆಟ್ಟಿ ಅಭಿಮಾನಿ ಬಳಗದಿಂದ ಆ್ಯಂಬುಲೆನ್ಸ್ ಲೋಕಾರ್ಪಣೆ – ಮಾಜಿ ಸಚಿವ ರಮಾನಾಥ ರೈಯವರಿಂದ ಆ್ಯಂಬುಲೆನ್ಸ್ ಸೇವೆಗೆ ಚಾಲನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಬ್ಲಾಕ್ ಯೂತ್ ಕಾಂಗ್ರೆಸ್ ,ಪಂಚಾಯತ್ ರಾಜ್ ಸಂಘಟನೆ ಹಾಗೂ ಕಾವು ಹೇಮನಾಥ ಶೆಟ್ಟಿ ಅಭಿಮಾನಿ ಬಳಗದ ವತಿಯಿಂದ ಆ್ಯಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ರೋಟರಿ ಬ್ಲಡ್ ಬ್ಯಾಂಕ್ ಹಾಲ್ ನಲ್ಲಿ ಜೂ.14 ರಂದು ನಡೆಯಿತು.

 

ಮಾಜಿ ಸಚಿವ ರಮಾನಾಥ ರೈ ತೆಂಗಿನಕಾಯಿ ಒಡೆದು ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು.ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಕೊರೋನ ಸಮಯದಲ್ಲಿ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಇದೀಗ ಹೇಮನಾಥ ಶೆಟ್ಟಿಯವರ ಅಭಿಮಾನಿಗಳ ಮೂಲಕ ಆಂಬುಲೆನ್ಸ್ ಲೋಕಾರ್ಪಣೆಯಾಗಿದೆ ಈ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ವತಿಯಿಂದ ಒಟ್ಟು ಹದಿನಾಲ್ಕು ಆಂಬುಲೆನ್ಸ್‌ ಗಳು ಕಾರ್ಯನಿರ್ವಹಿಸುವಂತೆ ಆಗಿದೆ ಎಂದು ಹೇಳಿದರು.

ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶದ ಬಗ್ಗೆ ಹೇಳಿದರು. ಧರ್ಮಗುರುಗಳಾದ ಹುಸೈನ್ ದಾರಿಮಿ ರೆಂಜಲಾಡಿ ಮಾತನಾಡಿ ಕಾಂಗ್ರೆಸ್ ಪಕ್ಷದ ಮೌಲ್ಯಗಳು ಹಾಗೂ ಅಗತ್ಯತೆಗಳ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್ ಮಹಮ್ಮದ್,ಅನಿತಾ ಹೇಮನಾಥ ಶೆಟ್ಟಿ,ನಿಕಟಪೂರ್ವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಜಲ್ ರಹೀಮ್,ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರನಾಥ್,ಕಾಂಗ್ರೆಸ್ ನಾಯಕರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.