HomePage_Banner
HomePage_Banner

ಪುಣಚ ಗ್ರಾಪಂ ಕೋವಿಡ್ ಕಾರ್ಯಪಡೆ ಸಭೆ, ಪ್ರೋತ್ಸಾಹ ಧನ ವಿತರಣೆ

ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನ ಕೋವಿಡ್ ಕಾರ್ಯಪಡೆಯ ಪ್ರಗತಿ ಪರಿಶೀಲನಾ ಸಭೆಯು ಗ್ರಾಪಂ ಅಧ್ಯಕ್ಷ ರಾಮಕೃಷ್ಣ ಪೂಜಾರಿಯವರು ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮದಲ್ಲಿ ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವಲ್ಲಿ ಕಾರ್ಯಪಡೆಯು ಉತ್ತಮವಾಗಿ ಕೆಲಸ ನಿರ್ವಹಿಸಿದೆ. ಆದರೂ ಗ್ರಾಮದಲ್ಲಿ ಪಾಸಿಟಿವ್ ಪ್ರಕರಣ ಹೆಚ್ಚುತ್ತಿದ್ದು ಈ ಬಗ್ಗೆ ಗ್ರಾಮಸ್ಥರು ಸ್ವಯಂ ಜಾಗೃತರಾಗಬೇಕು ಎಂದು ಅಧ್ಯಕ್ಷರು ತಿಳಿಸಿದರು. ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಕ್ವಿರಿಲ್ ಸೇವಾ ಸಂಸ್ಥೆಯ ಉದ್ಯಮಿ ಬೈಲುಗುತ್ತು ಯಶಸ್ವಿ ರೈಯವರು ಪ್ರೋತ್ಸಾಹ ಧನ ವಿತರಿಸಿದರು.

ಆರೋಗ್ಯ ಅಧಿಕಾರಿ ಡಾ.ಆಯಿಷತ್ ರಂಸೀಲಾರವರು ಕೋವಿಡ್ ಮಾಹಿತಿ ನೀಡಿದರು. ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಪ್ರತಿಭಾ ಜಗನ್ನಾಥ್, ಅಭಿವೃದ್ಧಿ ಅಧಿಕಾರಿ ಲಾವಣ್ಯ ಮತ್ತಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಕಾರ್ಯಪಡೆಯ ಸಿಬ್ಬಂದಿಗಳು, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.