HomePage_Banner
HomePage_Banner

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತದ ಬೆಳೆ ನೊಂದಾವಣೆಗೆ ಸೂಚನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ೨೦೨೧-೨೨ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು ಪ್ರಸಕ್ತ ಸಾಲಿನಲ್ಲಿ ಪುತ್ತೂರು ತಾಲೂಕಿಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಯೂನಿವರ್ಸಲ್ ಸೋಂಪೊ ಇನ್ಶುರೆನ್ಸ್ ಕಂಪೆನಿಯನ್ನು ನಿಗದಿಪಡಿಸಲಾಗಿದೆ.

ತಾಲೂಕಿಗೆ ಕೃಷಿ ಬೆಳೆಗೆ ಸಂಬಂಧಿಸಿದಂತೆ ಭತ್ತವು ನೋಂದಾಯಿತ ಬೆಳೆಯಾಗಿದ್ದು ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ನೋದಾಯಿಸಿಕೊಳ್ಳಬಹುದಾಗಿರುತ್ತದೆ. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ ವಿಕೋಪಗಳಿಂದ/ಹವಾಮಾನ ವೈಪರೀತ್ಯದಿಂದಾಗಿ ಶೇ.೭೫ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾಮೊತ್ತದ ಗರಿಷ್ಠ ಶೇ.೨೫ರ ಭಾಗವನ್ನು ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅಧಿಯಲ್ಲಿ ಶೇ.೫೦ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆವಿಮಾ ನಷ್ಟ ಪರಿಹಾರದಲ್ಲಿ ಶೇ.೨೫ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. ಇದಲ್ಲದೆ ಕಟಾವಿನ ನಂತರದ ಸಮಯದಲ್ಲಿ ಬೆಳೆಯನ್ನು ಒಣಗಿಸಲು ಬಿಟ್ಟಂತ ಸಂದರ್ಭದಲ್ಲಿ ೨ ವಾರದೊಳಗೆ ಅಕಾಳಿಕ ಮಳೆ/ಚಂಡಮಾರುತ ಸಹಿತ ಮಳೆಯಿಂದಾಗಿ ಕಟಾವು ಮಾಡಲಾದ ಬೆಳೆಯು ನಾಶವಾದರೆ ವಿಮಾ ಸಂಸ್ಥೆಯು ವೈಯುಕ್ತಿಕವಾಗಿ ಬೆಳೆ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸುತ್ತದೆ.

ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಭೂಕುಸಿತ, ಬೆಳೆ ಮುಳುಗಡೆ, ಆಲಿಕಲ್ಲು ಮಳೆಯಿಂದುಂಟಾಗುವ ನಷ್ಟವನ್ನು ವೈಯುಕ್ತಿಕ ಕ್ಷೇತ್ರವಾರು ನಿರ್ಧರಿಸಿ ರೈತರಿಗೆ ಬೆಳೆವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು. ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತದ ಬೆಳೆಗೆ ನೊಂದಾಯಿಸಲು ಆಗಷ್ಟ್ ೧೬ ಕೊನೆಯ ದಿನವಾಗಿದ್ದು ವಿಮಾ ಕಂತು ಒಂದು ಎಕರೆಗೆ ರೂ.೪೪೦ ಇರುತ್ತದೆ. ಒಟ್ಟು ವಿಮಾ ಮೊತ್ತ ಎಕರೆಗೆ ರೂ.೨೨೦೦೦ ಆಗಿರುತ್ತದೆ. ಅರ್ಹ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹತ್ತಿರದ ಬ್ಯಾಂಕುಗಳಲ್ಲಿ ನಿಗದಿತ ದಿನಾಂಕದೊಳಗೆ ವಿಮಾ ಕಂತಿನ ಮೊತ್ತವನ್ನು ಪಾವತಿಸಬೇಕಾಗಿ ಮತ್ತು ವಿಮೆ ಮಾಡಿಸಿದ ರೈತರು ಬೆಳೆ ನಷ್ಟದ ಬಗ್ಗೆ ಸಂಬಂಧಿಸಿದ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆ ಕಛೇರಿಗಳಿಗೆ ನಷ್ಟ ಸಂಭವಿಸಿದ ೪೮ ಗಂಟೆಯೊಳಗೆ ವಿಮೆ ಮಾಡಲಾದ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣವನ್ನು ತಿಳಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು. ಎಂದು ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.