HomePage_Banner
HomePage_Banner

ಕುಂಬ್ರ: ಕೋಟಿ ಚೆನ್ನಯ ಕಂಬಳ ಸಮಿತಿ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ಶಕುಂತಳಾ ಶೆಟ್ಟಿ ಅಭಿಮಾನಿ ಬಳಗದಿಂದ ಕೊರೋನಾ ವಾರಿಯರ್ಸ್ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಆಹಾರ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಒಂದು ಕಾಲದಲ್ಲಿ ಸರಕಾರ ಜಾರಿಗೆ ತಂದ ಸಂಪೂರ್ಣ ಸಾಕ್ಷರತೆ ಸಕ್ಸಸ್ ಆಗಲು ಅಂಗನವಾಡಿ ಕಾರ್ಯಕರ್ತೆಯರೇ ಕಾರಣರಾಗಿದ್ದಾರೆ. ಪ್ರತಿಯೊಂದು ಕೆಲಸ ಕಾರ್ಯದಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತಿದ್ದಾರೆ. ಜನಗಣತಿಯಿಂದ ಹಿಡಿದು ಸರಕಾರದ ಎಲ್ಲಾ ಕೆಲಸಗಳಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಆದರೆ ಅವರಿಗೆ ಸಂಬಳ ಮಾತ್ರ ಗೌರವಧನ. ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರಕಾರ ಗಮನ ಹರಿಸಬೇಕಾಗಿದೆ. ಕೊರೊನಾದಂತಹ ಆರೋಗ್ಯ ಯುದ್ಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಫ್ರಂಟ್‌ಲೈನ್ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.


ಅವರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮತ್ತು ಶಕುಂತಳಾ ಟಿ.ಶೆಟ್ಟಿ ಅಭಿಮಾನಿ ಬಳಗದ ವತಿಯಿಂದ ಜೂ.17ರಂದು ಕುಂಬ್ರದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ಸೋಂಕು ಹರಡುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸಿದ್ದಾರೆ ಇದಲ್ಲದೆ ಪ್ರತಿಯೊಂದು ಕೆಲಸ ಕಾರ್ಯದಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಮುಂಚೂಣಿಯಲ್ಲಿರುತ್ತಾರೆ ಈ ನಿಟ್ಟಿನಲ್ಲಿ ಅವರ ಸೇವೆಯನ್ನು ಗುರುತಿಸುವ ಕೆಲಸವನ್ನು ಇಲ್ಲಿ ಮಾಡಲಾಗಿದೆ ಎಂದ ವಿನಯ ಕುಮಾರ್ ಸೊರಕೆಯವರು ಇದು ಕಿಟ್ ಅಲ್ಲ ಅವರಿಗೆ ನಾವು ಕೊಡುವ ಗೌರವದ ಸನ್ಮಾನವಾಗಿದೆ ಎಂದು ಹೇಳಿದರು.

ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಬಡವರು, ಊಟಕ್ಕೆ ಇಲ್ಲದವರು ಎಂಬ ನೆಲೆಯಲ್ಲಿ ಕಿಟ್ ಕೊಡುತ್ತಿಲ್ಲ ಬದಲಾಗಿ ಅಂಗನವಾಡಿ ಕಾರ್ಯಕರ್ತೆಯರು ಕಷ್ಟದಿಂದ ಮೇಲೆ ಬಂದವರು ಆಗಿದ್ದಾರೆ. ಕೋರೋನಾದಂತಹ ಸಂಕಷ್ಟ ಕಾಲದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ವಾರಿಯರ್ಸ್ ಆಗಿ ಮಾಡುತ್ತಿರುವ ಸೇವೆಯನ್ನು ಗುರುತಿಸುವ ಕೆಲಸವನ್ನು ಮಾಡಿದ್ದೇವೆ ಎಂದರು.ಅಂಗನವಾಡಿ ಕಾರ್ಯಕರ್ತೆಯರನ್ನು ನಾವು ಯಾವ ಕಾಲಕ್ಕೂ ಮರೆಯಲ್ಲ ಎಂದ ಅವರು, ನಿಮ್ಮ ಸೇವೆ, ಕೆಲಸವನ್ನು ನೆನಪು ಮಾಡಿಕೊಳ್ಳುವ ಕೆಲಸವನ್ನು ಈ ಕಿಟ್ ವಿತರಿಸುವ ಮೂಲಕ ನಿಮಗೆ ಗೌರವ ಸಲ್ಲಿಸುತ್ತಿದ್ದೇವೆ ಎಂದರು. ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿಯವರು ಸಂದರ್ಭೋಚಿತವಾಗಿ ಮಾತನಾಡಿದರು.

ವೇದಿಕೆಯಲ್ಲಿ ಅಮೆಚೂರ್ ಕಬಡ್ಡಿ ಅಸೋಸಿಯೇಶನ್‌ನ ಅಧ್ಯಕ್ಷ ಸುರೇಂದ್ರ ರೈ ಬಳ್ಳಮಜಲು, ಆರ್ಯಾಪು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಹಮ್ಮದ್ ಅಲಿ, ಸಾಮಾಜಿಕ ಮುಂದಾಳು ಎಂ.ಬಿ.ವಿಶ್ವನಾಥ್, ಸಹಕಾರಿ ಯೂನಿಯನ್ ಜಿಲ್ಲಾ ಅಧ್ಯಕ್ಷ ಪ್ರಸಾದ್ ಕೌಶಲ್ಯ ಶೆಟ್ಟಿ, ಉದ್ಯಮಿ ಶಿವರಾಮ ಆಳ್ವ, ಒಳಮೊಗ್ರು ಗ್ರಾಪಂ ಉಪಾಧ್ಯಕ್ಷೆ ಸುಂದರಿ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಸ್ವಾಗತಿಸಿದರು. ಪ್ರಗತಿಪರ ಕೃಷಿಕ ಶಶಿಕಿರಣ್ ರೈ ನೂಜಿಬೈಲು ವಂದಿಸಿದರು. ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಗ್ರಾಪಂ ಸದಸ್ಯರು, ಪ್ರಗತಿಪರ ಕೃಷಿಕರು,ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.

ಉಚಿತ ಆಂಬುಲೆನ್ಸ್
ಕೋವಿಡ್‌ನ ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರಿಗೆ ಆರೋಗ್ಯದಲ್ಲಿ ಯಾವುದಾದರೂ ತೊಂದರೆ ಉಂಟಾದಲ್ಲಿ ಅವರನ್ನು ಮಂಗಳೂರಿಗೆ ಉಚಿತವಾಗಿ ಕೊಂಡೊಯ್ಯುವ ಸಲುವಾಗಿ ಆಂಬುಲೆನ್ಸ್ ವ್ಯವಸ್ಥೆಯನ್ನು ಯಂಗ್ ಬ್ರಿಗೇಡ್ಸ್ ವತಿಯಿಂದ ಮಾಡಲಾಗಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ತಿಳಿಸಿದರು.

ತಾಲೂಕಿನ ೨೧೫ ಅಂಗನವಾಡಿ ಕೇಂದ್ರದ ೪೩೦ ಜನರಿಗೆ ಕಿಟ್ ವಿತರಣೆ
ಪುತ್ತೂರು ತಾಲೂಕಿನ ೨೧೫ ಅಂಗನವಾಡಿ ಕೇಂದ್ರದ ೪೩೦ ಮಂದಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ. ಇದರಲ್ಲಿ ಕುಂಬ್ರ ಭಾಗದ ೧೦೯ ಕೇಂದ್ರದ ೨೧೬ ಮಂದಿಗೆ ಆಹಾರ ಕಿಟ್ ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.