HomePage_Banner
HomePage_Banner

ಹಡಿಲು ಭೂಮಿಯಲ್ಲಿ ಭತ್ತದ ಕೃಷಿ – ನಗರಸಭೆ ವ್ಯಾಪ್ತಿಯಲ್ಲಿ ಪ್ರಥಮ ವ್ಯವಸಾಯಕ್ಕೆ ಚಾಲನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರ ತತ್ವದ ಮೂಲಕ ಮತ್ತು ಶಾಸಕ ಸಂಜೀವ ಮಠಂದೂರು ಅವರ ಪರಿಕಲ್ಪನೆಯಂತೆ ಹಡಿಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಯೋಜನೆಗೆ ನಗರಸಭೆ ವ್ಯಾಪ್ತಿಯಲ್ಲಿ ಪ್ರಥಮವಾಗಿ ಜೂ. ೧೬ಕ್ಕೆ ಪಾಂಗಳಾಯಿ ವಾರ್ಡ್‌ನ ಶ್ರೀ ಮುಂಡ್ಯತ್ತಾಯ ದೇವಸ್ಥಾನದ ಹಾಗು ಖಾಸಗಿ ಭೂಮಿಯಲ್ಲಿರುವ ಸುಮಾರು 3 ಎಕ್ರೆ ಜಮೀನಿನಲ್ಲಿ ಬೇಸಾಯಕ್ಕೆ ಚಾಲನೆ ನೀಡಲಾಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರಯ ತೆಂಗಿನ ಕಾಯಿ ಒಡೆಯುವ ಮೂಲಕ ಬೇಸಾಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಮುಂಡ್ಯತ್ತಾಯ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ವಿನಯ ಭಂಡಾರಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ನಾಯ್ಕ್, ಸಚಿನ್ ಟ್ರೇಡರ್ಸ್ ಮಾಲಕ ಮಂಜುನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಅಧಿಕಾರಿ ಮಹೇಶ್, ಸಂತೋಷ್ ಬೋನಂತಾಯ, ಶಿವಕುಮಾರ್, ನಾಗೇಶ್ ಪ್ರಭು, ಸಂಪತ್ ಕುಮಾರ್, ತಾರಾನಾಥ್ ರೈ ಸೇರಿದಂತೆ ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.