HomePage_Banner
HomePage_Banner

ಅಮೇಚೂರ್ ಕಬಡ್ಡಿ ಅಸೋಸಿಯೇಶನ್, ಕೋಟಿ-ಚೆನ್ನಯ್ಯ ಕಂಬಳ ಸಮಿತಿ ವತಿಯಿಂದ ಉಪ್ಪಿನಂಗಡಿ ಭಾಗದ ಅಂಗನವಾಡಿ ಕಾರ‍್ಯಕರ್ತರಿಗೆ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಅಮೇಚೂರ್ ಕಬಡ್ಡಿ ಅಸೋಸಿಯೇಶನ್ ಮತ್ತು ಪುತ್ತೂರು ಕೋಟಿ-ಚೆನ್ನಯ್ಯ ಕಂಬಳ ಸಮಿತಿ ವತಿಯಿಂದ ಉಪ್ಪಿನಂಗಡಿ ಭಾಗದ ಅಂಗನವಾಡಿ ಕಾರ‍್ಯಕರ್ತರಿಗೆ ಮತ್ತು ಸಹಾಯಕಿಯರಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ ಕಾರ‍್ಯಕ್ರಮ ಜೂ. 17 ರಂದು ಉಪ್ಪಿನಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಜರಗಿತು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಕಿಟ್ ವಿತರಿಸಿ ಮಾತನಾಡಿ ಕೊರೋನಾ ವಿರುದ್ಧ ಹೋರಾಟದಲ್ಲಿ ಅಂಗನವಾಡಿ ಕಾರ‍್ಯಕರ್ತರ ಸೇವೆ ಅವಿಸ್ಮರಣೀಯವಾಗಿದ್ದು, ಅವರನ್ನು ಗುರುತಿಸಿ, ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ‍್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಸದಸ್ಯ ಡಾ. ರಘು ಸಂದರ್ಭೋಚಿತವಾಗಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಕಾರ‍್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಕಬಡ್ಡಿ ಅಸೋಸಿಯೇಶನ್‌ನ ಶಿವರಾಮ ಆಳ್ವ, ಅಶ್ರಫ್ ಬಸ್ತಿಕ್ಕಾರ್, ಕೃಷ್ಣ ರಾವ್ ಅರ್ತಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಸ್ವಾಗತಿಸಿ, ಅಂಗನವಾಡಿ ಕಾರ‍್ಯಕರ್ತರ ಸಂಘದ ಅಧ್ಯಕ್ಷೆ ಮಲ್ಲಿಕಾ ವಂದಿಸಿದರು. ಜಿಲ್ಲಾ ಕಾಂಗ್ರಸ್ ಕಾರ‍್ಯದರ್ಶಿ ಮುರಳೀಧರ ರೈ ಮಠಂಂತಬೆಟ್ಟು ಕಾರ‍್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.