HomePage_Banner
HomePage_Banner

ಕಾವು ಹೇಮನಾಥ ಶೆಟ್ಟಿಯವರಿಂದ ಕಾಸರಗೋಡು ಶಾಸಕರ ಭೇಟಿ-ಗೌರವಾರ್ಪಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತ್ತೀಚೆಗೆ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಗೊಂಡಿರುವ ಎನ್ ಎ ನೆಲ್ಲಿಕುನ್ನು ಅವರನ್ನು ಕಿನ್ನಿಂಗಾರ್ ನೂತನ ಕಾಂಗ್ರೆಸ್ ಕಛೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಂಯೋಜಕ ಕಾವು ಹೇಮನಾಥ್ ಶೆಟ್ಟಿಯವರು ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿ ಸನ್ಮಾನಿಸಿದರು. ತಾನು ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಮೂರು ಚುನಾವಣೆಗಳಲ್ಲಿಯೂ ಪ್ರಚಾರದಲ್ಲಿ ಪಾಲ್ಗೊಂಡು ಗೆಲುವಿಗೆ ಕಾರಣಕರ್ತರಾದ ಕಾವು ಹೇಮನಾಥ್ ಶೆಟ್ಟಿಯವರನ್ನು ಎನ್.ಎ ನೆಲ್ಲಿಕುನ್ನುವರರೂ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ, ಉದ್ಯಮಿ, ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ಕೆಪಿಸಿಸಿ ಸಾಮಾಜಿಕ ಜಾಲತಾಣ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಸಿ ಅಶೋಕ್ ಶೆಟ್ಟಿ, ರಾಜ್ಯ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿ ಫಾರೂಕ್ ಬಾಯಬೆ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಮತ್ತು ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.