HomePage_Banner
HomePage_Banner

ಮುಂಡೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಇಳಿಮುಖವಾದ ಪಾಸಿಟಿವ್ ಪ್ರಕರಣ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

@ಯೂಸುಫ್ ರೆಂಜಲಾಡಿ

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಗ್ರಾ.ಪಂ ವ್ಯಾಪ್ತಿಯಲ್ಲಿ 43 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ೫೦ಕ್ಕಿಂತ ಹೆಚ್ಚಿನ ಪ್ರಕರಣಗಳು ದಾಖಲಾಗಿ ಗ್ರಾ.ಪಂ ವ್ಯಾಪ್ತಿ ಸೀಲ್‌ಡೌನ್ ಆಗುವುದೋ ಎನ್ನುವ ಆತಂಕ ಕೂಡಾ ಗ್ರಾಮಸ್ಥರಲ್ಲಿತ್ತು. ಇದೀಗ ಸಕ್ರಿಯ ಪ್ರಕರಣದಲ್ಲಿ ಗಣನೀಯ ಇಳಿಕೆ ಕಂಡ ಪರಿಣಾಮ ಗ್ರಾಮದ ಜನತೆ ನಿರಾಳರಾಗಿದ್ದಾರೆ.

ಇದೀಗ ಗ್ರಾ.ಪಂ ವ್ಯಾಪ್ತಿಯಲ್ಲಿ 29 ಸಕ್ರಿಯ ಪ್ರಕರಣಗಳಿದ್ದು ಗ್ರಾ.ಪಂ ವ್ಯಾಪ್ತಿಯಲ್ಲಿ ಹೊಸ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗದೇ ಇರುವುದು ಹಾಗೂ ಸೋಂಕಿತರ ಸಂಖ್ಯೆ ವೇಗವಾಗಿ ಇಳಿಮುಖವಾಗುತ್ತಿದೆ. ಕೆಲವು ಮನೆಗಳಲ್ಲಿ ಐದಕ್ಕಿಂತ ಹೆಚ್ಚಿನ ಜನರಿಗೆ ವಾರಗಳ ಹಿಂದೆ ಪಾಸಿಟಿವ್ ಬಂದಿರುವ ಕಾರಣ ಅಂತಹ ಮನೆಯವರ ವರದಿ ನೆಗೆಟಿವ್ ಆದಾಗ ಗ್ರಾಮದಲ್ಲಿ ಪಾಸಿಟಿವ್ ಪ್ರಕರಣ ಇನ್ನಷ್ಟು ಇಳಿಮುಖವಾಗಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.