HomePage_Banner
HomePage_Banner

ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಯಲದ 11 ಸ್ಕೌಟ್, ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ ಪುರಸ್ಕಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: 2020-21ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ವತಿಯಿಂದ ಮಾರ್ಚ್ ತಿಂಗಳಲ್ಲಿ ಬೆಥನಿ ಆಂಗ್ಲ ಮಾದ್ಯಮ ಶಾಲೆ ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಸ್ಕೌಟ್ಸ್-ಗೈಡ್ಸ್ ಪರೀಕ್ಷೆಯಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ 10ನೇ ತರಗತಿಯ 11 ವಿದ್ಯಾರ್ಥಿಗಳು ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾಲಯದ 10ನೇ ತರಗತಯ ಗೈಡ್ಸ್ ವಿದ್ಯಾರ್ಥಿಗಳಾದ ಧೃತಿ ಎಸ್., ಅನುಜ್ಞಾ ಆಂಡ್ರಿಯಾ, ಮಹತಿರಾಣಿ ಪಿ.ಎಸ್., ಜಿ. ಅಶ್ವಿಜ ನಾಯಕ್, ಕೆ. ವೈಷ್ಣವಿ ಕಿಣಿ, ಸಂಜನಾ ಕೆ., ಸಾನ್ವಿ ಕಾಮತ್ ಹಾಗೂ ೧೦ನೇ ತರಗತಿಯ ಸ್ಕೌಟ್ಸ್ ವಿದ್ಯಾರ್ಥಿಗಳಾದ ಆಕಾಶ್ ಕೆ. ಸಾಲಿಯಾನ್, ಸೃಜಲ್ ಎನ್.ಕೆ., ಸುಮಂತ್ ಕೆ.ಎಸ್., ಪ್ರಥಮ್ ಎಸ್.ಪಿ., ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದ ವಿದ್ಯಾರ್ಥಿಗಳಾಗಿರುತ್ತಾರೆ. ಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ಇವರಿಗೆ ಮಾರ್ಗದರ್ಶನ ನೀಡಿರುತ್ತಾರೆ ಎಂದು ಪ್ರಾಂಶುಪಾಲರು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.