HomePage_Banner
HomePage_Banner

ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ರವರೆಗೆ ಅಗತ್ಯ ಖರೀದಿಗೆ ಅವಕಾಶ- ಜಿಲ್ಲಾಧಿಕಾರಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದ.ಕ.ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಈಗ ಜಾರಿಯಲ್ಲಿರುವ ಲಾಕ್‌ಡೌನ್ ಮಾರ್ಗಸೂಚಿಯನ್ನು ಜು.೫ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರರವರು ಆದೇಶ ಹೊರಡಿಸಿದ್ದಾರೆ.

ಅಗತ್ಯ ವಸ್ತು ಖರೀದಿಗೆ ಇದ್ದ ಅವಧಿಯನ್ನು ಬೆಳಿಗ್ಗೆ ೭ ರಿಂದ ಮಧ್ಯಾಹ್ನ ೧ ಗಂಟೆ ತನಕ ವಿಸ್ತರಿಸಲಾಗಿದ್ದು ಸಂಜೆ ೭ ರಿಂದ ಮರುದಿನ ಬೆಳಿಗ್ಗೆ ೭ರ ತನಕ ನೈಟ್ ಕರ್ಫ್ಯೂ ಹಾಗೂ ಶುಕ್ರವಾರ ಸಂಜೆ ೭ ಗಂಟೆಯಿಂದ ಸೋಮವಾರ ಬೆಳಿಗ್ಗೆ ೭ಗಂಟೆ ತನಕ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ಆದೇಶಿಸಲಾಗಿದ್ದು ಜೂ.೨೧ರಿಂದ ಜು.೫ರ ತನಕ ಹೊಸ ಮಾರ್ಗಸೂಚಿ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬಸ್ ಸಂಚಾರಕ್ಕೆ ಅನುಮತಿ ಇಲ್ಲ:ಜಿಲ್ಲೆಯಾದ್ಯಂತ ಯಾವುದೇ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿಲ್ಲ. ಅಟೋ ರಿಕ್ಷಾ ಮತ್ತು ಟ್ಯಾಕ್ಸಿಯಲ್ಲಿ ಇಬ್ಬರು ಪ್ರಯಾಣಿಕರು ಸಂಚರಿಸಲು ಅನುವು ಮಾಡಿಕೊಡಲಾಗಿದೆ.ಆದೇಶ ಉಲ್ಲಂಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-೨೦೦೫ ಮತ್ತು ಸಾಂಕ್ರಾಮಿಕ ರೋಗಗಳ ಅಧಿನಿಯಮ ೨೦೨೦ರಂತೆ ಕ್ರಮ ಜರಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹೊಸ ಮಾರ್ಗಸೂಚಿ:
* ಬೆಳಿಗ್ಗೆ ೭ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‌ಗಳು ಮತ್ತು ಪ್ರಾಣಿಗಳ ಮೇವು ಮಾರಾಟ ಮಾಡುವ ಅಂಗಡಿಗಳು, ಬೀದಿಬದಿ ವ್ಯಾಪಾರಸ್ಥರು. ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪಡಿತರ ಅಂಗಡಿಗಳಿಗೆ ಅನುಮತಿಸಲಾಗಿದೆ. ಮದ್ಯದಂಗಡಿಗಳು ಮತ್ತು ಮಳಿಗೆಗಳಿಗೆ ಪಾರ್ಸೆಲ್‌ಗೆ ಮಾತ್ರವೇ ಅವಕಾಶ ನೀಡಲಾಗಿದೆ.
* ಕನ್ನಡಕದ ಅಂಗಡಿಗಳು ಬೆಳಗ್ಗೆ ೭.೦೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ.
* ಎಲ್ಲಾ ಉತ್ಪಾದನಾ ಘಟಕಗಳು/ ಸ್ಥಾಪನೆ/ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ ಶೇ.೫೦ರಷ್ಟು ಸಿಬ್ಬಂದಿಗಳೊಂದಿಗೆ ಹಾಗೂ ಉಡುಪು ತಯಾರಿಕೆಯಲ್ಲಿ ತೊಡಗಿರುವ ಘಟಕಗಳು/ಸಂಸ್ಥೆಗಳು / ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ ಶೇ.೩೦ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ.
* ಸಿಮೆಂಟ್ ಸ್ಪೀಲ್ ಸೇರಿದಂತೆ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ವ್ಯಾಪಾರ ಮಾಡುವ ಅಂಗಡಿಗಳು / ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡ ನಿರ್ಮಾಣ ಚಟುವಟಿಕೆಗಳು/ದುರಸ್ತಿ ಕಾರ್ಯಗಳಿಗೆ ಅನುಮತಿಸಲಾಗಿದೆ.
* ಟ್ಯಾಕ್ಸಿ ಮತ್ತು ಆಟೋರಿಕ್ಷಾಗಳು ಕಾರ್ಯನಿರ್ವಹಿಸಬಹುದಾಗಿದ್ದು, ಗರಿಷ್ಠ ಇಬ್ಬರು ಪ್ರಯಾಣಿಕರನ್ನು ಮಾತ್ರವೇ ಕರೆದೊಯ್ಯಲು ಅನುಮತಿಸಲಾಗಿದೆ.
* ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಕಛೇರಿಗಳೊಂದಿಗೆ ಶೇ.೫೦ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಕೃಷಿ ಮತ್ತು ಸಂಬಂಧಿತ
ಕಛೇರಿಗಳು, ಲೋಕೋಪಯೋಗಿ ಇಲಾಖೆ, ವಸತಿ, ಪ್ರಾದೇಶಿಕ ಸಾರಿಗೆ ಕಛೇರಿಗಳು, ಸಹಕಾರ ಮತ್ತು ನಬಾರ್ಡ್, ಭಾರತ ಸರ್ಕಾರದ ಕಂದಾಯ ಇಲಾಖೆಯ ಕಛೇರಿಗಳಿಗೆ ಅನುಮತಿಸಲಾಗಿದೆ.
* ಜಿಲ್ಲೆಯಲ್ಲಿ ಪಾರ್ಕ್/ಉದ್ಯಾನವನಗಳನ್ನು ಸಾರ್ವಜನಿಕರಿಗೆ ತೆರೆಯಲು ಅವಕಾಶವಿರುವುದಿಲ್ಲ
* ಘನತ್ಯಾಜ್ಯ ನಿರ್ವಹಣೆ ಸೇರಿದಂತೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳನ್ನು ಅನುಮತಿಸಲಾಗಿದೆ.
ರಾತ್ರಿ ಕರ್ಫ್ಯೂ ಮಾರ್ಗಸೂಚಿ: * ಅತ್ಯವಶ್ಯಕ ಚಟುವಟಿಕೆಗಳನ್ನು ಹೊರತುಪಡಿಸಿ, ರಾತ್ರಿ ೭.೦೦ ಗಂಟೆಯಿಂದ ಬೆಳಗ್ಗೆ ೭ ಗಂಟೆಯ ತನಕ ಜನ ಸಂಚಾರ ನಿರ್ಬಂಧ
* ತುರ್ತು ಸಂದರ್ಭಗಳಲ್ಲಿ ರೋಗಿಗಳು ಮತ್ತು ಅವರ ಪರಿಚಾರಕರು/ವ್ಯಕ್ತಿಗಳನ್ನು ಸ್ಥಳಾಂತರಿಸಬಹುದಾಗಿದೆ.
* ರಾತ್ರಿಯಲ್ಲಿ ಕಾರ್ಯಾಚರಣೆ ಅಗತ್ಯವಿರುವ ಎಲ್ಲಾ ಕೈಗಾರಿಕೆಗಳು/ ಕಂಪನಿಗಳಿಗೆ ಕಾರ್ಯನಿರ್ವಹಿಸಲು ಅನುಮತಿ. ಈ ಸಂಸ್ಥೆಗಳ ನೌಕರರು, ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸಬಹುದಾಗಿದೆ.
* ಟೆಲಿಕಾಂ ಮತ್ತು ಇಂಟರ್ನೆಟ್ ಸೇವೆಯ ನೌಕರರು ಮತ್ತು ವಾಹನಗಳಿಗೆ ಆಯಾ ಸಂಸ್ಥೆ ನೀಡುವ ಗುರತಿನ ಚೀಟಿಯನ್ನು ತೋರಿಸಿ ಸಂಚರಿಸಬಹುದಾಗಿದೆ. ಐಟಿ ಮತ್ತು ಐಟಿಇಎಸ್ ಕಂಪನಿಗಳು/ ಸಂಸ್ಥೆಯ ಅಗತ್ಯ ಸಿಬ್ಬಂದಿ ನೌಕರರು ಮಾತ್ರವೇ ಕಚೇರಿಯಿಂದ ಕಾರ್ಯನಿರ್ವಹಿಸುವುದು. ಉಳಿದವರು ಮನೆಯಿಂದಲೇ ಕಾರ್ಯನಿರ್ವಹಿಸುವುದು.
* ಔಷಧಾಲಯಗಳು ಸೇರಿದಂತೆ ವೈದ್ಯಕೀಯ, ತುರ್ತು ಮತ್ತು ಅಗತ್ಯ ನೇವೆಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಇತರ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
* ಟ್ರಕ್‌ಗಳು, ಸರಕು ವಾಹನಗಳು ಅಥವಾ ಖಾಲಿ ವಾಹನಗಳು ಸೇರಿದಂತೆ ಯಾವುದೇ ಸರಕುಗಳ ಚಲನೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ವಸ್ತುಗಳ ಹೋಂ ಡೆಲಿವರಿ ಸೇವೆಗಳು ಮತ್ತು ಇ-ಕಾಮರ್ಸ್ ಕಂಪೆನಿಗಳ ಕಾರ್ಯಾಚರಣೆ ಅನುಮತಿಸಲಾಗಿದೆ.
* ರೈಲುಗಳು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ಇದೆ. ವಿಮಾನ ನಿಲ್ದಾಣಗಳು, ಬಸ್ ಟರ್ಮಿನಲ್ಗಳು/ ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಇತ್ಯಾದಿಗಳಿಗೆ ಸಾರ್ವಜನಿಕ ಸಾರಿಗೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ವಿಮಾನ, ರೈಲು ಮತ್ತು ರಸ್ತೆಯ ಮೂಲಕ ಪ್ರಯಾಣದ ದಾಖಲೆಗಳು, ಟಿಕೆಟ್‌ಗಳನ್ನು ತೋರಿಸಿ ಸಂಚರಿಸಲು ಅವಕಾಶವಿದೆ.
ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ: * ಶುಕ್ರವಾರ ಸಂಜೆ ೭.೦೦ ಗಂಟೆಯಿಂದ ಸೋಮವಾರ ಬೆಳಿಗ್ಗೆ ೭.೦೦ಗಂಟೆಯವರೆಗೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
* ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ತುರ್ತು ಅಗತ್ಯ ಸೇವೆಗಳು ಮತ್ತು ಕೋವಿಡ್-೧೯ ಕಂಟೈನ್ಮೆಂಟ್ ಮತ್ತು ನಿರ್ವಹಣೆ ಕರ್ತವ್ಯಗಳ ವಿರ್ವಹಣೆಗೆ ಅನುಮತಿಯಿರುತ್ತದೆ ಮತ್ತು ಕರ್ತವ್ಯನಿರತ ಅಧಿಕಾರಿಗಳು, ಸಿಬ್ಬಂದಿಗೆ ಅನಿಯಂತ್ರಿತ ಚಲನೆಯನ್ನು ಅನುಮತಿಸಲಾಗಿದೆ.
* ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು ೨೪*೭ ಕಾರ್ಯಾಚರಣೆಗಳ ಅಗತ್ಯವಿರುವ ಎಲ್ಲಾ ಕೈಗಾರಿಕೆಗಳು/ ಕಂಪನಿಗಳು/ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸಬಹುದಾಗಿರುತ್ತದೆ. ಆದಾಗ್ಯೂ ಸಾಧ್ಯವಾದಷ್ಟನ್ನು ಮುಟ್ಟಿಗೆ ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು.
* ಟೆಲಿಕಾಂ ಮತ್ತು ಇಂಟರ್ನೆಟ್ ಸೇವೆಯ ನೌಕರರು ಮತ್ತು ವಾಹನಗಳಿಗೆ ಆಯಾ ಸಂಸ್ಥೆ/ ಸಂಸ್ಥೆ ನೀಡುವ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸಬಹುದಾಗಿರುತ್ತದೆ, ಐಟಿ ಮತ್ತು ಐಟಿಇಎಸ್ ಕಂಪನಿಗಳು ಸಂಸ್ಥೆಯ ಅಗತ್ಯ ಸಿಬ್ಬಂದಿ/ನೌಕರರು ಮಾತ್ರವೇ ಕಚೇರಿಯಿಂದ ಕಾರ್ಯನಿರ್ವಹಿಸುವುದು. ಉಳಿದಂತೆ ಮನೆಯಿಂದಲೇ ಕಾರ್ಯನಿರ್ವಹಿಸುವುದು.
* ರೋಗಿಗಳು ಮತ್ತು ಅವರ ಪರಿಚಾರಕರು/ ತುರ್ತು ಅಗತ್ಯವಿರುವ ವ್ಯಕ್ತಿಗಳು ಲಸಿಕೆ ತೆಗೆದುಕೊಳ್ಳಲು ಉzಶಿಸಿರುವ ಅರ್ಹ ಜನರಿರಿಗೆ ಕನಿಷ್ಠ ಪುರಾವೆಗಳೊಂದಿಗೆ ಚಲನೆಯನ್ನು ಅನುಮತಿಸಲಾಗಿದೆ.
* ಬೆಳಿಗ್ಗೆ ೭ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‌ಗಳು ಮತ್ತು ಪ್ರಾಣಿಗಳ ಮೇವು ಮಾರಾಟ ಮಾಡುವ ಅಂಗಡಿಗಳು, ಬೀದಿಬದಿ ವ್ಯಾಪಾರಸ್ಥರು, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪಡಿತರ ಅಂಗಡಿಗಳು, ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳು(ಪಾರ್ಸೆಲ್ ಮಾತ್ರ) ಅವಕಾಶ ನೀಡಲಾಗಿದೆ.
* ರೆಸ್ಟೋರೆಂಟ್ ಹೊಟೇಲ್‌ಗಳಿಂದ ತಿನಿಸುಗಳನ್ನು ಮನೆಗೆ ತೆಗೆದುಕೊಂಡು ಹೋಗಲು ಮತ್ತು ಹೋಂ ಡೆಲಿವರಿಗೆ ಮಾತ್ರ ಅನುಮತಿ.
* ರೈಲುಗಳು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ಇದೆ. ವಿಮಾನ ನಿಲ್ದಾಣಗಳು, ಬಸ್ ಟರ್ಮಿನಲ್ಗಳು/ ಬಸ್ ನಿಲ್ದಾಣಗಳು/ ರೈಲ್ವೆ ನಿಲ್ದಾಣಗಳು ಇತ್ಯಾದಿಗಳಿಗೆ ಸಾರ್ವಜನಿಕ ಸಾರಿಗೆ ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಚಲನೆ, ವಿಮಾನ, ರೈಲು ಮತ್ತು ರಸ್ತೆಯ ಮೂಲಕ ಪ್ರಯಾಣದ ದಾಖಲೆಗಳು, ಟಿಕೆಟ್‌ಗಳನ್ನು ತೋರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ.
* ಈಗಾಗಲೇ ನಿಗದಿಪಡಿಸಿದ ವಿವಾಹಗಳನ್ನು ಆಯಾ ಮನೆಯಲ್ಲಿ ನಿಕಟ ಕುಟುಂಬ ಸಂಬಂಧಿಗಳು ಮಾತ್ರ ಒಳಗೊಂಡು ಗರಿಷ್ಠ ೨೫ ಜನರ ಪರಿಮಿತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ.
* ಗರಿಷ್ಠ ೫ ಜನರ ಪರಿಮಿತಿಗೊಳಪಟ್ಟು ಶವಸಂಸ್ಕಾರ/ಅಂತ್ಯ ಕ್ರಿಯೆ ನಡೆಸಲು ಅನುಮತಿ ನೀಡಲಾಗಿದೆ.

 

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.