HomePage_Banner
HomePage_Banner

ನಾಳೆ (ಜೂ.24) ಸರಕಾರಿ ಆಸ್ಪತ್ರೆ, ನೆಲ್ಲಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ನೆಲ್ಯಾಡಿ, ಕೌಕ್ರಾಡಿ, ಗೋಳಿತೊಟ್ಟು, ಕೋಡಿಂಬಾಡಿ, ಬನ್ನೂರು, ಪಡ್ನೂರಿನಲ್ಲಿ ಕೋವಿಡ್ ಲಸಿಕೆ ನೀಡಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: 18 ವರ್ಷ ಮೇಲ್ಪಟ್ಟ ಆದ್ಯತಾ ಗುಂಪಿನವರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕಮ್ರ ಜೂ. 24ರಂದು ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆಯ್ದ ಕಡೆಗಳಲ್ಲಿ ನೀಡಲಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ತಿಳಿಸಿದ್ದಾರೆ.

ನೆಲ್ಯಾಡಿ, ಕೌಕ್ರಾಡಿ ಹೊಸಮಜಲು ಶಾಲೆ, ಗೋಳಿತೊಟ್ಟು ಪಂಚಾಯತ್, ಉಪ್ಪಿನಂಗಡಿಯ ಕೋಡಿಂಬಾಡಿ ಪಂಚಾಯತ್ ಹಾಲ್, ಬನ್ನೂರು ಗ್ರಾ.ಪಂ ವ್ಯಾಪ್ತಿಯ ಪಡ್ನೂರು ಶಾಲೆ, ಸಾರ್ವಜನಿಕ ಆಸ್ಪತ್ರೆ ಪುತ್ತೂರು ಮತ್ತು ನೆಲ್ಲಿಕಟ್ಟೆಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಿಕೆ ಕಾರ್ಯಕ್ರಮ ನಡೆಯಲಿದ್ದು, 18 ವರ್ಷದ ಮೇಲ್ಪಟ್ಟ ಅದ್ಯತಾ ಗುಂಪಿನವರಾದ ವಿದೇಶ ಪ್ರಯಾಣ ಮಾಡುವವರು, ವರ್ತಕರು, ಕಟ್ಟಡ ಕಾರ್ಮಿಕರು, ಸರಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೆ ಕೋವಿಶೀಲ್ಡ್ 1ನೇ ಮತ್ತು 2ನೇ ಡೋಸ್ ಲಸಿಕೆ ಲಭ್ಯವಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.