HomePage_Banner
HomePage_Banner

ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಚೌಕಟ್ಟು ನಗರಸಭೆಯಲ್ಲಿ ನೂತನ ಬೈಲಾ ಸಿದ್ಧತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿ ಪ್ಲಾನಿಂಗ್ ಮತ್ತು ಕಟ್ಟಡದ ರೂಪುರೇಶೆಯ ಕುರಿತು ಹೊಸದಾಗಿ ಬೈಲ್ ಸಿದ್ದತೆಯ ಸಭೆಯು ಪುಡಾ ಮತ್ತು ಪೇಸ್ ಇಂಜಿನಿಯರ್‌ಗಳ ಉಪಸ್ಥಿತಿಯಲ್ಲಿ ನಗರಸಭೆ ಸಭಾಂಗಣದಲ್ಲಿ ನಡೆಯಿತು.

ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದೆ ನಗರಸಭೆ ವ್ಯಾಪ್ತಿಯಲ್ಲಿ ನಿರ್ಮಾಣ ಆಗುವ ಕಟ್ಟಡಗಳ ಚೌಕಟ್ಟು ಕುರಿತು ಚರ್ಚಿಸಲಾಯಿತು. ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಪೌರಾಯುಕ್ತ ಮಧು ಎಸ್ ಮನೋಹರ್, ಪುಡಾ ಕಾರ್ಯದರ್ಶಿ ಅಭಿಲಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತೂರು ಎಸೋಸಿಯೇಶನ್ ಆಫ್ ಸಿವಿಲ್ ಇಂಜನಿಯರ್‌ನ ಅಧ್ಯಕ್ಷ ರಮೇಶ್ ಭಟ್, ಹರೀಶ್ ಪುತ್ತೂರಾಯ, ಪಿ.ಜಿ.ಜಗನ್ನಿವಾಸ ರಾವ್, ಶಂಕರ್ ಭಟ್, ರಾಘವೇಂದ್ರ ಭಟ್, ಪುತ್ತೂರು ನಗರಸಭೆ ಕಾರ್ಯಪಾಲಕ ಇಂಜಿನಿಯರ್ ಅರುಣ್, ಕಿರಿಯ ಅಭಿಯಂತರ ಶ್ರೀಧರ್ ನಾಯ್ಕ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.