HomePage_Banner
HomePage_Banner

ಈಶ್ವರಮಂಗಲ: ನೇರೊಲ್ತಡ್ಕ ನಿವಾಸಿ ಶರತ್‌ ರಬ್ಬರ್‌ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ನೇರೊಲ್ತಡ್ಕ ನಿವಾಸಿ ಮುದರ ಎಂಬವರ ಪುತ್ರ ಶರತ್‌(20 ವ) ರವರು ಜೂ.24ರಂದು ಸಂಜೆ ತಮ್ಮ ಮನೆಯ ಸಮೀಪದಲ್ಲಿರುವ ರಬ್ಬರ್‌ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅನಾರೋಗ್ಯದಿಂದಿದ್ದ ಇವರನ್ನು ಜೂ.25ರಂದು ಚಿಕಿತ್ಸೆಗೆ ಕರೆದುಕೊಂಡು ಹೋಗಲು ಸಿದ್ಧತೆ ನಡೆಸಿದ್ದು ಜೂ.24ರಂದು ಶರತ್‌ ರವರು ಮಧ್ಯಾಹ್ನದಿಂದ ಕಾಣೆಯಾಗಿದ್ದರು. ಈ ಬಳಿಕ ಮನೆಯವರು ಹುಡುಕಾಟ ನಡೆಸಿದ್ದರು. ಈ ವೇಳೆ ಶರತ್ ಅವರ ಮನೆಯಿಂದ ತುಸು ದೂರದಲ್ಲಿದ್ದ ವೆಂಕಟರಮಣ ಭಟ್‌ ರವರ ಮಾಲಕತ್ವದ ರಬ್ಬರ್‌ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಪಕ್ಕದ ಮನೆಯ ಬಾವಿಯ ಹಗ್ಗವನ್ನು ತಂದು ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.

ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.