HomePage_Banner
HomePage_Banner

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣ: 4ನೇ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಪ್ರಕರಣದ ಆರೋಪಿ ಅರ್ಫೈನ್ ಅಬ್ದುಲ್ ರಹಮಾನ್‍ರವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್ ಫಿರೇರಾರವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

ಜೂನ್ 2ರಂದು ಬಂಟ್ವಾಳ ತಾಲೂಕು ಮಾಣಿ ಸಮೀಪದ ಪೆರಾಜೆ ಎಂಬಲ್ಲಿ ಆರೋಪಿತರು ಲಾರಿ ಚಾಲಕನಿಗೆ ಹಲ್ಲೆ ನಡೆಸಿ, ಪರಾರಿಯಾಗಿದ್ದರು. ಉಪ್ಪಿನಂಗಡಿ ಕಡೆಗೆ ಚಲಾಯಿಸುತ್ತಿದ್ದ ಕೀಯಾ ಕಾರನ್ನು ನೆಕ್ಕಿಲಾಡಿ ಚೆಕ್ ಪಾಯಿಂಟ್‍ನಲ್ಲಿದ್ದ ಪೊಲೀಸರು ನಿಲ್ಲಿಸಲು ಸೂಚಿಸಿದಾಗ ಆರೋಪಿಗಳು ಕಾರನ್ನು ನಿಲ್ಲಿಸದೆ ಪುತ್ತೂರು ಕಡೆಗೆ ಚಲಾಯಿಸಿದ ವೇಳೆ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದ ಮೇರೆಗೆ ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಎಂಬಲ್ಲಿ ಕಾರನ್ನು ತಡೆದು ನಿಲ್ಲಿಸಿದಾಗ ಕಾರು ಚಾಲಕ ಮತ್ತು ಕಾರಿನಲ್ಲಿದ್ದ ಮೂರು ಜನ ಸಿಬ್ಬಂದಿಗಳನ್ನು ಕೈಯಿಂದ ದೂಡಿ ಕಾಲಿನಿಂದ ತುಳಿದು, ಪರಾರಿಯಾಗಲು ಪ್ರಯತ್ನಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಅದೇ ದಿನ ಮಹಮ್ಮದ್ ಅರಫತ್, ನಾಸೀರ್, ಮಹಮ್ಮದ್ ಆಸೀಫ್ ಮತ್ತು ಅರ್ಫೈನ್ ಅಬ್ದುಲ್ ರಹಮಾನ್ ಎಂಬವರುಗಳ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರು ನೀಡಿದ್ದ ದೂರಿನಂತೆ ಕೇಸು ದಾಖಲಾಗಿತ್ತು.‌ ನಂತರ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು ಓರ್ವ ಅರೋಪಿ ಪರಾರಿಯಾಗಿದ್ದ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 323, 353 ಮತ್ತು 34 ರಂತೆ ಪ್ರಕರಣವನ್ನು ದಾಖಲಿಸಿ ಪೊಲೀಸರು ನ್ಯಾಯಾಲಯಕ್ಕೆ ಪ್ರಥಮ ವರ್ತಮಾನ ವರದಿ ಸಲ್ಲಿಸಿದ್ದರು. ಬಂಧಿತ ಮೂವರು ಆರೋಪಿಗಳಿಗೆ ಈಗಾಗಲೇ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ತಲೆ ಮರೆಸಿಕೊಂಡಿದ್ದ 4ನೇ ಆರೋಪಿ ಅರ್ಫೈನ್ ಅಬ್ದುಲ್ ರಹಮಾನ್‍ರವರು ತನ್ನ ಪರ ವಕೀಲರಾದ ಮಹೇಶ್ ಕಜೆಯವರು ಮುಖಾಂತರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಗೆ ಶರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.