HomePage_Banner
HomePage_Banner

ವಿಟ್ಲ ಪೊಲೀಸ್ ಠಾಣಾ ಎಸ್.ಐ ವಿನೋದ್ ರೆಡ್ಡಿ ಉತ್ತರಕನ್ನಡ ಜಿಲ್ಲೆಯ ರಾಮನಗರ ಠಾಣೆಗೆ ವರ್ಗಾವಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ವಿಟ್ಲ ಠಾಣಾ ಎಸ್. ಐ ವಿನೋದ್ ಎಸ್. ರೆಡ್ಡಿಯವರನ್ನು ಉತ್ತರಕನ್ನಡ ಜಿಲ್ಲೆಯ ಕಾಮತ್ತೂಸು, ರಾಮನಗರ ಠಾಣೆಗೆ ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ರವರು ಆದೇಶ ಹೊರಡಿಸಿದ್ದಾರೆ. ೨೦೧೭ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ವಿನೋದ್ ಎಸ್. ರೆಡ್ಡಿಯವರು ಆ ಬಳಿಕ ಮಂಗಳೂರು ಕೇಂದ್ರ ಸ್ಥಾನದಲ್ಲಿ ಪ್ರೊಬೆಷನರಿ ಎಸ್.ಐ. ಆಗಿ ಕರ್ತವ್ಯ ಆರಂಭಿಸಿದರು. ಬಳಿಕ ಉಡುಪಿ ಜೆಲ್ಲೆಯ ಹೆಜಮಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ 2019ರಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಪ್ರೊಬೆಷನರಿ ಎಸ್.ಐ ಆಗಿ ವರ್ಗಾವಣೆಗೊಂಡು ಬಂದಿದ್ದರು. ವಿಟ್ಲ ಠಾಣಾ ಎಸ್ ಐ ಆಗಿದ್ದ ಯಲ್ಲಪ್ಪರವರ ವರ್ಗಾವಣೆಗೊಂಡ ಬಳಿಕ ವಿನೋದ್ ಎಸ್. ರೆಡ್ಡಿರವರನ್ನು ವಿಟ್ಲ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ವಿನೋದ್ ಎಸ್. ರೆಡ್ಡಿ ರವರು ಮೂಲತಃ ಬಾಗಲಕೋಟೆಯವರಾಗಿದ್ದು ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.