HomePage_Banner
HomePage_Banner

34ನೆಕ್ಕಿಲಾಡಿ ದರ್ಬೆ ಲಕ್ಷ್ಮಣ ನಾಯ್ಕ ನೇಣು ಬಿಗಿದು ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ : ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.26ರಂದು ಬೆಳಿಗ್ಗೆ 34-ನೆಕ್ಕಿಲಾಡಿ ಗ್ರಾಮದ ದರ್ಬೆ ಎಂಬಲ್ಲಿ ಬೆಳಕಿಗೆ ಬಂದಿದೆ. ದರ್ಬೆ ನಿವಾಸಿ ಲಕ್ಷ್ಮಣ ನಾಯ್ಕ (50ವ.) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪತ್ನಿ ಮಕ್ಕಳೊಂದಿಗೆ ಮನಸ್ತಾಪ ಮಾಡಿಕೊಂಡಿದ್ದ ಇವರು ತನ್ನ ಮನೆಯಲ್ಲಿ ಒಬ್ಬಂಟಿಯಾಗಿ ವಾಸ ಮಾಡಿಕೊಂಡಿದ್ದರು. ಇವರ ಪತ್ನಿ ಹಾಗೂ ಮಕ್ಕಳು ಅದೇ ಪರಿಸರದಲ್ಲಿರುವ ತನ್ನ ಸಹೋದರನ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಯೂಮಿನಿಯಮ್ ಫ್ಯಾಕ್ಟರಿಯೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದ ಇವರು ಕೆಲವು ದಿನಗಳಿಂದ ಬೆನ್ನುನೋವು ಎಂದು ಹೇಳಿಕೊಂಡಿದ್ದರು. ಜೂ.26ರಂದು ಬೆಳಗ್ಗೆ ಮನೆಯಿಂದ ಇವರು ಹೊರಗೆ ಬಾರದಿದ್ದಾಗ ಸಂಶಯಗೊಂಡು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಇವರು ಒಂದು ದಿನದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.