HomePage_Banner
HomePage_Banner

ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ನೀಡಿಕೆಗೆ ಚಾಲನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ – 19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ಕೋವಿಡ್ ಲಸಿಕೆ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿನ ಆದರ್ಶ ಆಸ್ಪತ್ರೆಯಲ್ಲಿ ಜೂ. 26ರಂದು ಲಸಿಕೆ ನೀಡುವ ಚಾಲನಾ ಕಾರ್ಯಕ್ರಮ ನಡೆಯಿತು. ಯುವ ಉದ್ಯಮಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಬಳಜ್ಜ ಅವರು ಲಸಿಕೆ ಪಡೆಯುವ ಮೂಲಕ ಚಾಲನೆ ನೀಡಿದರು.

ಭಾರತದಲ್ಲಿ ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಕೋವಿಡ್ ಲಸಿಕೆ ಕೊಡಿಸಬೇಕೆಂಬ ನಿಟ್ಟಿನಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ನೀಡಿಕೆಗೆ ಅವಕಾಶ ಮಾಡಿಕೊಡಲಾಗಿದೆ. ನಮ್ಮ ಆಸ್ಪತ್ರೆಯಲ್ಲಿ ಮಂಗಳೂರು ಇಂಡಿಯಾನ ಆಸ್ಪತ್ರೆಯ ಸಹಯೋಗದಲ್ಲಿ ಯಾವುದೇ ಪೂರ್ವ ನೋಂದಣಿ ಅಗತ್ಯವಿಲ್ಲದೆ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ದರದಲ್ಲಿ ನೀಡಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಡಾ. ಎಂ.ಕೆ.ಪ್ರಸಾದ್ ತಿಳಿಸಿದರು. ಈ ಸಂದರ್ಭದಲ್ಲಿ ಡಾ. ಶ್ಯಾಮ ಉಪಸ್ಥಿತರಿದ್ದರು. ಇಂಡಿಯಾ ಆಸ್ಪತ್ರೆಯ ಆರೋಗ್ಯ ಸಹಾಯಕರು ಲಸಿಕೆ ನೀಡುವಲ್ಲಿ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.