HomePage_Banner
HomePage_Banner

ಕೋವಿಡ್ ಸಂದರ್ಭದಲ್ಲಿ ಮಲೇರಿಯ ರೋಗದ ನಿರ್ಲಕ್ಷ್ಯ ಬೇಡ-ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ ಕಾರ್ಯಗಾರದಲ್ಲಿ ಡಾ. ದೀಪಕ್ ರೈ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: 150 ವರ್ಷಗಳ ಇತಿಹಾಸ ಇರುವ ಮಲೇರಿಯಾ ರೋಗವು ಸೊಳ್ಳೆಗಳಿಂದ ಹರಡುವ ರೋಗವಾಗಿದ್ದು, ರಾಜ್ಯದಲ್ಲಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣ ಹೆಚ್ಚಾಗಿ ಕಂಡು ಬಂದಿದೆ. ಈ ನಿಟ್ಟಿನಲ್ಲಿ ಕೋವಿಡ್ ಸಂದರ್ಭದಲ್ಲೂ ಮಲೇರಿಯ ರೋಗದ ನಿರ್ಲಕ್ಷ್ಯ ಮಾಡದೆ ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರು ಹೇಳಿದರು.

ದ.ಕ.ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಪುತ್ತೂರು ಇದರ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ 2021ರ ಅಂಗವಾಗಿ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ಕಾರ್ಯಕ್ರಮ’ದಲ್ಲಿ ಮಾಹಿತಿ ನೀಡಿದರು. ಮಲೇರಿಯ ರೋಗವನ್ನು ಕಡಿಮೆಗೊಳಿಸುವುದಕ್ಕಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯೋನ್ಮುಖವಾಗಿದೆ. ರಾಜ್ಯದಲ್ಲಿ ನಮ್ಮ ದ.ಕ.ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿದೆ. ರಾಜ್ಯದಲ್ಲಿ ನಮ್ಮ ದ.ಕ.ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿದೆ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 277 ಪ್ರಕರಣ ವರದಿಯಾಗಿದೆ. ಪುತ್ತೂರು ತಾಲೂಕಿನಲ್ಲಿ ಕಳೆದ ವರ್ಷ 13 ಪ್ರಕರಣ ವರದಿಯಾಗಿದ್ದು, ಈ ವರ್ಷ 2 ಪ್ರಕರಣಗಳು ಮಾತ್ರ ವರದಿಯಾಗಿದೆ. ಮಲೇರಿಯಾ ನಿಯಂತ್ರಣಕ್ಕಾಗಿ ಎಲ್ಲರ ಸಹಕಾರ ಅಗತ್ಯವಾಗಿದೆ. ಪುತ್ತೂರಿನಲ್ಲಿ ಖಾಸಗಿ ಪ್ರಯೋಗಾಲಯಗಳಲ್ಲಿ ಪತ್ತೆಯಾಗುವ ಮಲೇರಿಯಾ ಮತ್ತು ಡೆಂಗ್ಯೂ ಪ್ರಕರಣದ ವರದಿ ಸರಿಯಾಗಿ ಇಲಾಖೆಗೆ ಸಿಗುತ್ತಿಲ್ಲ. ಈ ಬಗ್ಗೆ ಅವರಿಗೆ ಸೂಚನೆ ಕೊಟ್ಟರೂ ಅವರು ಸ್ಪಂಧಿಸುತ್ತಿಲ್ಲ. ಅದರಿಂದಾಗಿ ಸಮಗ್ರ ಅಂಕಿ ಆಂಶಗಳನ್ನು ಪಡೆದುಕೊಳ್ಳುವಲ್ಲಿ ತೊಡಕಾಗುತ್ತಿದೆ ಎಂದು ತಿಳಿಸಿದರು.

ಸೊಳ್ಳೆಗಳ ಉತ್ಪತ್ತಿ ಕಡಿಮೆ ಮಾಡಬೇಕು:
ಶೂನ್ಯ ಮಲೇರಿಯಾ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಎಲ್ಲರಲ್ಲಿ ಜಾಗೃತಿ ಅಗತ್ಯವಿದೆ. ಸೊಳ್ಳೆಗಳ ಉತ್ಪತ್ತಿ ಕಡಿಮೆ ಮಾಡುವುದರಿಂದ ಮಲೇರಿಯಾದ ಮೂಲ ನಾಶ ಮಾಡಲು ಸಾದ್ಯವಿದೆ. ಡೆಂಗ್ಯೂ ಸೊಳ್ಳೆ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಆದರೆ ಮಲೇರಿಯ ರೋಗ ನೀಡುವ ಈ ಸೊಳ್ಳೆಗಳು ರಾತ್ರಿ ವೇಳೆಯಲ್ಲಿ ಕಚ್ಚುತ್ತವೆ. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಫಾಗಿಂಗ್ ಮಾಡಲಾಗುತ್ತಿದೆ ಮತ್ತು ರಾಸಾಯನಿಕ ಮಿಶ್ರಿತ ಸೊಳ್ಳೆ ಪರದೆಗಳನ್ನು ನೀಡಲಾಗುತ್ತಿದೆ. ಇದು ತುಂಬಾ ಪರಿಣಾಮಕಾರಿಯಾಗಿದೆ ಎಂದ ಅವರು ಆದಷ್ಟು ಮನೆ ಮನೆಗಳಲ್ಲಿ ಅಡಿಕೆ ಸಿಪ್ಪೆ ಅಥವಾ ಇತರೆ ಹೊಗೆ ಔಷಧವನ್ನು ಬೆಳಗ್ಗೆ ಮತ್ತು ಸಂಜೆ ಮಾಡಿದರೆ ಉತ್ತಮ ಎಂದರು.

ನೀರು ನಿಲ್ಲದಂತೆ ನೋಡಿ:
ಮನೆಯಲ್ಲಿ ಅಲ್ಲಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು, ನಿಂತ ನೀರುಗಳಿಗೆ ರಾಸಾಯನಿಕ ಸಿಂಪಡಿಸುವುದು ಮಾಡಬೇಕು. ಜ್ವರ ಕಾಣಿಸಿಕೊಂಡಾಗ ತಕ್ಷಣವೇ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದ ಅವರು ಮಲೇರಿಯಾ ರೋಗಿಗಳು ಸರಿಯಾದ ಚಿಕಿತ್ಸೆ ಪಡೆದುಕೊಳ್ಳದಿದ್ದಲ್ಲಿ ಸಾವು ಸಂಭವಿಸುವ ಅಪಾಯವಿದೆ. ಮಲೇರಿಯಾ ಕಂಡು ಬಂದಲ್ಲಿ ರೋಗಿಗಳ ದೇಹದ ತೂಕಕ್ಕೆ ಅನುಗುಣವಾಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಕಿ ಪದ್ಮಾವತಿ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.