HomePage_Banner
HomePage_Banner

ಕೃಷ್ಣನಗರ: ಬಾಣಂತಿ ಮೃತ್ಯು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೃಷ್ಣನಗರ ನಿವಾಸಿ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಜೂ. 27 ರಂದು ನಡೆದಿದೆ. ಕೃಷ್ಣನಗರ ನಿವಾಸಿಯಾಗಿದ್ದು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ಮೃತಪಟ್ಟವರು. 2 ತಿಂಗಳ ಹಿಂದೆಯಷ್ಟೆ ಅವರು ಮಗುವಿಗೆ ಜನ್ಮ ನೀಡಿದ ಬಳಿಕ ಅನಾರೋಗ್ಯದಿಂದಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

 

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.