HomePage_Banner
HomePage_Banner

ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ 15 ಬಲಿ. ಹೊಸತಾಗಿ 454 ಪಾಸಿಟಿವ್-641 ಮಂದಿ ಗುಣಮುಖ

Puttur_Advt_NewsUnder_1
Puttur_Advt_NewsUnder_1

* 6006 ಸಕ್ರಿಯ ಪ್ರಕರಣ
* ಪಾಸಿಟಿವಿಟಿ ಪ್ರಮಾಣ ಶೇ. 5.64

ಪುತ್ತೂರು: ದ.ಕ.ಜಿಲ್ಲೆಯಲ್ಲಿ ಕೋವಿಡ್‌ಗೆ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಿದ್ದು ಜೂ.27ರಂದು 15 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ ಹೊಸತಾಗಿ 454 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 641 ಮಂದಿ ಗುಣಮುಖರಾಗಿದ್ದಾರೆ.
ಈ ದಿನ 15 ಮಂದಿ ಬಲಿಯಾಗುವುದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್‌ಗೆ ಈ ತನಕ ಮೃತಪಟ್ಟವರ ಸಂಖ್ಯೆ 1151ಕ್ಕೇರಿದೆ. ಈ ದಿನ 454 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.5.64ಕ್ಕಿಳಿದಿದೆ. ಈವರೆಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೊಳಗಾದವರ ಸಂಖ್ಯೆ 91,865ಕ್ಕೇರಿದೆ. ಈ ದಿನ 641 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ ಗುಣಮುಖರಾದವರ ಸಂಖ್ಯೆ 84,708ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 6006 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 10,19,825 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 9,27,960 ಮಂದಿಯ ವರದಿ ನೆಗೆಟಿವ್ ಬಂದಿದೆ.

ದಂಡ ವಸೂಲಿ:
ಮಾಸ್ಕ್ ನಿಯಮ ಉಲ್ಲಂಘಿಸಿದ 75,572 ಮಂದಿಯಿಂದ  92,11,867 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.