HomePage_Banner
HomePage_Banner

ವಿದ್ಯಾರ್ಥಿಗಳು ಬಾಲಕಾರ್ಮಿಕತೆಗೆ ಒಳಗಾಗದಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಬೆಟ್ಟಂಪಾಡಿ ಯುನಿಟ್‌ನಿಂದ ಮನವಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವ `ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ’ ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬೆಟ್ಟಂಪಾಡಿ ಯುನಿಟ್ ವತಿಯಿಂದ ಬೆಟ್ಟಂಪಾಡಿ ಗ್ರಾ.ಪಂಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿರುವ ಯಾವ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತರಾಗಬಾರದು, ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು, ಕಾರ್ಯಾಂಗ ವ್ಯವಸ್ಥೆಯನ್ನು ಸರಿಯಾಗಿ ಸದುಪಯೋಗಪಡಿಸಿ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಯ ಅಡಿಯಲ್ಲಿ ಬಾಲ ಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಬಗ್ಗೆ ಸರಕಾರ ಚಿಂತಿಸಬೇಕು ಎಂದು ಆಗ್ರಹಿಸಿ ಮನವಿಯನ್ನು ನೀಡಲಾಯಿತು.

ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸದಸ್ಯ ಅರಿಫ್ ತಂಬುತಡ್ಕ, ಕ್ಯಾಂಪಸ್ ಫ್ರಂಟ್ ಬೆಟ್ಟಂಪಾಡಿ ಯುನಿಟ್ ಅಧ್ಯಕ್ಷ ರಾಝಿಕ್ ಉಪಸ್ಥಿತರಿದ್ಧರು.

 

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.