HomePage_Banner
HomePage_Banner

ಕೇರಳದಲ್ಲಿ ಡೆಲ್ಟಾ ಸೋಂಕಿನ ಲಕ್ಷಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ – ಇಂದಿನಿಂದ(ಜು.29) ಜಿಲ್ಲೆಗೆ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಡಾ. ರಾಜೇಂದ್ರ ಕೆ.ವಿ.

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಮಂಗಳೂರು: ಕೇರಳ ರಾಜ್ಯದಲ್ಲಿ ಡೆಲ್ಟಾ ಸೋಂಕಿನ ಲಕ್ಷಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರಡ್ಕ ಹಾಗೂ ನೆಟ್ಟಣಿಗೆ ಮುಡ್ನೂರು ಸಹಿತ ಗಡಿಭಾಗಗಳ ಮೂಲಕ ಕೇರಳದಿಂದ ದ.ಕ ಜಿಲ್ಲೆಗೆ ಪ್ರವೇಶಿಸುವವರಿಗೆ ಜೂ. 29ರಿಂದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಕೇರಳ ಗಡಿ ಭಾಗದಲ್ಲಿ ಕೊರೋನಾ ಪ್ರಕರಣಗಳು ವಿಪರೀತವಾಗಿರುವಂತೆಯೇ ಡೆಲ್ಟಾ ಸೋಂಕಿನ ಲಕ್ಷಣಗಳು ಹೆಚ್ಚಾಗುತ್ತಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು ಸಂಪರ್ಕಿಸುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ದ.ಕ. ಜಿಲ್ಲೆಯ ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ. ಅದರ ಪ್ರಕಾರ ತಲಪಾಡಿ, ನೆಟ್ಟಣಿಗೆ ಮುಡ್ನೂರು, ಸಾರಡ್ಕ, ಜಾಲ್ಸೂರು ಚೆಕ್‌ಪೋಸ್ಟ್‌ಗಳಲ್ಲಿ 247 ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನಸಂಚಾರ ಹೆಚ್ಚಿರುವಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಲು ನಿರ್ದೇಶಿಸಲಾಗಿದೆ ಎಂದವರು ತಿಳಿಸಿದ್ದಾರೆ.

ದ.ಕ. ಜಿಲ್ಲೆಗೆ ಪ್ರವೇಶಿಸುವವರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರಬೇಕು. ದ.ಕ. ಹಾಗೂ ಕಾಸರಗೋಡು ನಡುವೆ ಆರೋಗ್ಯಕ್ಕೆ ಸಂಬಂಧಿಸಿ ರೋಗಿಗಳು ಬಂದು ಹೋಗುವುದರಿಂದ ಆರ್‌ಟಿಪಿಸಿಎಸ್ ಟೆಸ್ಟ್ ಆಸ್ಪತ್ರೆಗಳಲ್ಲಿ ಮಾಡಿಸಬೇಕು. ಗಡಿ ಭಾಗದಲ್ಲಿಯೂ ಓಡಾಡುವರನ್ನು ತಪಾಸಣೆ ಮಾಡಲು ಚೆಕ್‌ಪೋಸ್ಟ್ ಗಳಲ್ಲಿಯೂ ಸ್ಟ್ಯಾಬ್ ಟೆಸ್ಟ್ ಕೇಂದ್ರಗಳನ್ನೂ ತೆರೆಯಲಾಗುವುದು. ದ.ಕ. ಜಿಲ್ಲೆಯವರು ಕಾಸರಗೋಡು ಸೇರಿದಂತೆ ಬೇರೆಡೆ ಓಡಾಡುತ್ತಿದ್ದರೆ ಅಲ್ಲಿಂದ ಬರುವಾಗ ಕಡ್ಡಾಯವಾಗಿ ಆರ್‌ಟಿಪಿಸಿಆರ್ ವರದಿಯನ್ನು ತರಬೇಕು. ಹಾಗಾಗಿ ಉಭಯ ರಾಜ್ಯಗಳ ನಡುವಿನ ಅನಗತ್ಯ ಸಂಚಾರವನ್ನು ನಿಲ್ಲಿಸಬೇಕು. ನಮ್ಮಲ್ಲಿ ಕೊರೋನ ಸೋಂಕಿತರ ಸಂಖ್ಯೆ ಶೇ. 5ರೊಳಗಿದೆ. ಇದೀಗ ೩ನೆ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗುತ್ತಿದ್ದು, ಗಡಿ ಭಾಗದಲ್ಲಿ ತೀವ್ರ ನಿಗಾ ವಹಿಸಲು ಪೊಲೀಸರು ಹಾಗೂ ಪಂಚಾಯತ್‌ಗೆ ಸೂಚನೆ ನೀಡಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.