HomePage_Banner
HomePage_Banner

ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ವರ್ಚುವಲ್ ವಿಚಾರ ಸಂಕಿರಣ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ “Basics of GST and Path to Success in GST” ಎಂಬ ವಿಷಯದ ಬಗ್ಗೆ ಝೂಮ್ ವೇದಿಕೆಯಲ್ಲಿ ರಾಜ್ಯಮಟ್ಟದ ವಿಚಾರ ಸಂಕೀರ್ಣ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ  Fellow Chartered Accountant ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿಎ ಮೈಲಾರ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಇವರು ಜಿಎಸ್‌ಟಿಯ ಮೂಲ ಮಾಹಿತಿ, ಲೆಕ್ಕಾಚಾರಗಳು, ಪ್ರಯೋಜನಗಳು ಹಾಗೂ ವಿದ್ಯಾರ್ಥಿಗಳಿಗೆ ಲಭ್ಯವಿರುವ ಜಿಎಸ್‌ಟಿಗೆ ಸಂಬಂಧಪಡುವ ಕೋರ್ಸುಗಳು ಹಾಗೂ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಪುತ್ತೂರಿನ ಸರಕಾರಿ ಮಹಿಳಾ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಆಡಿ.ಸುಕೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಜಿಎಸ್‌ಟಿ ವಿದೇಶಗಳಲ್ಲಿ ಹಾಗೂ ಭಾರತಕ್ಕೆ ಬಂದ ಹಾದಿಯನ್ನು ವಿವರಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಭಾರತದಲ್ಲಿ ಜಿಎಸ್‌ಟಿಯ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ.ಜಿ ಭಟ್ ಹಾಗೂ ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಮಾತನಾಡಿ ಶುಭಹಾರೈಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ರವಿಕಲ ಸ್ವಾಗತಿಸಿದರು. ವಿಭಾಗದ ಉಪನ್ಯಾಸಕ ಮುಕುಂದ ಕೃಷ್ಣ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಸುಮಾರು 25 ಕಾಲೇಜುಗಳಿಂದ 430 ಕ್ಕೂ ಅಧಿಕ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.