HomePage_Banner
HomePage_Banner

ಫಿಲೋಮಿನಾ ಕಾಲೇಜಿನಲ್ಲಿ ಲಸಿಕೆ ಅಭಿಯಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ತಡೆಗಟ್ಟುವಿಕೆಯಲ್ಲಿ ಪ್ರಧಾನ ಪಾತ್ರ ವಹಿಸಿರುವ ರೋಗನಿರೋಧಕ ಶಕ್ತಿ ಎನಿಸಿದ ಲಸಿಕೆಯನ್ನು ಪ್ರತಿಯೋರ್ವರೂ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ಸೂಕ್ಷ್ಮ ಯೋಜನೆ ಎನ್ನುವ ಘೋಷವಾಕ್ಯದಡಿ ವಯಸ್ಸು ೧೮ ತುಂಬಿದ ಕಾಲೇಜ್ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ಆಯಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎನ್ನುವ ಸರಕಾರದ ಆದೇಶದಂತೆ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಪ್ರಥಮ ಹಂತದಲ್ಲಿ ಜೂ.೨೯ ರಂದು ಕಾಲೇಜಿನ ಸಿಲ್ವರ್ ಜ್ಯುಬಿಲಿ ಸಭಾಂಗಣದಲ್ಲಿ ಸುಮಾರು ೩೦೦ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಹಾಕಿಸಿಕೊಳ್ಳಲಾಯಿತು.

ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈಯವರು ಮಾತನಾಡಿ, ಕೊರೋನಾ ಲಸಿಕೆ ಹಾಕಿಸಿಕೊಂಡರೆ ಏನು ಪ್ರಯೋಜನ ಎಂಬುದರ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ|ಲಿಯೋ ನೊರೋನ್ಹಾ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಕಛೇರಿ ಅಧೀಕ್ಷಕರಾದ ಜೋನ್ ಮೊಂತೇರೊ, ಉಪನ್ಯಾಸಕರಾದ ಅಭಿಷೇಕ್ ಸುವರ್ಣ, ತೇಜಸ್ವಿ ಭಟ್, ಧನ್ಯ ಪಿ.ಟಿ, ವಿಪಿನ್ ನಾಕ್, ಆಶಿತ್, ದಿನಕರ್ ಅಂಚನ್ ಹಾಗೂ ಸುದೀಪ್ ವಾಸ್‌ರವರು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.