HomePage_Banner
HomePage_Banner

ಫಿಲೋಮಿನಾ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ|ಜೋನ್ ಬಿ. ಸಿಕ್ವೇರಾ ಸೇವಾ ನಿವೃತ್ತಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ|ಜೋನ್ ಬಿ. ಸಿಕ್ವೇರಾರವರು ತಮ್ಮ 36 ವರ್ಷಗಳ ಸೇವೆಯ ಬಳಿಕ, ಜೂ.30 ರಂದು ಸೇವಾ ನಿವೃತ್ತಿ ಹೊಂದಿರುತ್ತಾರೆ.

ಶೈಕ್ಷಣಿಕ ವರ್ಷ 1986 ರಲ್ಲಿ ತಮ್ಮ ಉಪನ್ಯಾಸಕ ವೃತ್ತಿಯನ್ನು ಆರಂಭಿಸಿದ ಇವರು, 2001 ರಿಂದ 2004ರ ತನಕ ಸೇಕ್ರೆಡ್ ಹಾರ್ಟ್‌ಕಾಲೇಜು ಮಡಂತ್ಯಾರು ಇಲ್ಲಿ ಸೇವೆ ಸಲ್ಲಿಸಿರುತ್ತಾರೆ. 1961, ಜೂನ್ 23 ರಂದು, ಕೃಷಿ ಕುಟುಂಬದಲ್ಲಿ ಜನಿಸಿದ ಇವರು, ತಮ್ಮ ಆರಂಭದ ಶಿಕ್ಷಣವನ್ನು ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಮೇರಮಜಲು ಮತ್ತು ನಿತ್ಯ ಸಹಾಯ ಮಾತಾ ಪ್ರೌಢಶಾಲೆ ಅರ್ಕುಳ ಇಲ್ಲಿ ಪಡೆದು, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯುಸಿ ಮತ್ತು ಬಿ.ಎ. ಪದವಿ ಶಿಕ್ಷಣವನ್ನು ಪೂರೈಸಿ, ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಗಳಿಸಿದರು.

ವೃತ್ತಿ ಬದುಕಿನಲ್ಲಿ ಹಲವು ಮಹತ್ವದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರದ ಅಧ್ಯಯನ ಮಂಡಳಿಯ ಸದಸ್ಯರಾಗಿ ಮತ್ತು ಪರೀಕ್ಷಾ ಮಂಡಳಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುವುದಲ್ಲದೆ, ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ನಿರ್ದೇಶಕರಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾಗಿ, ಅಧ್ಯಾಪಕ ಸಂಘದ ಕಾರ್ಯದರ್ಶಿಯಾಗಿ, ಮಾನವಿಕ ಸಂಘದ ನಿರ್ದೇಶಕರಾಗಿ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕದ ನಿರ್ದೇಶಕರಾಗಿ ಸೇವೆ ಸಲ್ಲಿಸಿರುತ್ತಾರೆ. ಜೊತೆಗೆ ಪರಿಣಾಮಕಾರಿ ಸಂವಹನ, ಸುಂದರ ಕೈಬರಹ, ಜೀವನ ಕೌಶಲ ಮುಂತಾದ ವಿಷಯಗಳಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ. ಇವರಿಂದ ತರಬೇತಿಯನ್ನು ಪಡೆದ ಬಹಳಷ್ಟು ವಿದ್ಯಾರ್ಥಿಗಳು ಉತ್ತಮ ಉದ್ಯೋಗವನ್ನು ಪಡೆಯುವಲ್ಲಿ ಸಫಲರಾಗಿರುತ್ತಾರೆ.

ಕೊಂಕಣಿ ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿರುವ ಪ್ರೊ|ಜೆ.ಬಿ ಸಿಕ್ವೇರಾರವರು ಮಾಯಿದೆ ದೇವುಸ್ ಚರ್ಚ್‌ನ ಡೊನ್ ಬೋಸ್ಕೊ ಕ್ಲಬ್ ಪ್ರಕಟಿಸುವ ‘ಪುತ್ತೂರ್‍ಚೆಂ ನೆಕೆತ್ರ್’ ಮಾಸಿಕ ಪತ್ರಿಕೆಯ ಸಂಪಾದಕರೂ ಆಗಿರುತ್ತಾರೆ. ಇವರು ಮೂಲತಃ ಮಂಗಳೂರು ತಾಲೂಕಿನ ಬೊಂಡಂತಿಲ ಗ್ರಾಮದವರಾಗಿದ್ದು, ನಿವೃತ್ತಿಯ ಬಳಿಕ ಪತ್ನಿ ಮಕ್ಕಳೊಂದಿಗೆ ತಮ್ಮ ಸ್ವಗ್ರಾಮದಲ್ಲಿ ಕೃಷಿ ಕಾಯಕದಲ್ಲಿ ತೊಡಗಿಕೊಳ್ಳಲಿದ್ದಾರೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.