HomePage_Banner
HomePage_Banner

ಹಿರೇಬಂಡಾಡಿ: ಒಕ್ಕೂಟದ ಸದಸ್ಯರಿಗೆ ಲಾಭಾಂಶ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಹಿರೇಬಂಡಾಡಿ: ಶ್ರೀ ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು ಉಪ್ಪಿನಂಗಡಿ ವಲಯದ ಹಿರೇಬಂಡಾಡಿ ಎ ಮತ್ತು ಬಿ ಒಕ್ಕೂಟದ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮ ಜೂ.೨೯ರಂದು ಹಿರೇಬಂಡಾಡಿ ಗ್ರಾ.ಪಂ.ನ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು.

 

 

ಶಾಸಕ ಸಂಜೀವ ಮಠಂದೂರುರವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಸುಧಾರಿಸಿದೆ. ಗ್ರಾಮೀಣ ಭಾಗದ ಜನರ ಬದುಕು ಹಸನಾಗಲು ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ. ಜನರು ಸ್ವಾಭಿಮಾನ, ಸ್ವಾವಲಂಬಿಯಾಗಿ ಬದುಕುವಂತಾಗಿದೆ. ಖಾವಂದರ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ನೆಮ್ಮದಿಯ ಜೀವನ ಸಾಗಿಸುವಂತಾಗಿದೆ. ಲಾಭಾಂಶದಿಂದ ಬಂದ ಹಣವನ್ನು ದುರುಪಯೋಗಪಡಿಸಿಕೊಳ್ಳದೆ ಒಳ್ಳೆಯ ಕೆಲಸಕ್ಕೆ ವಿನಿಯೋಗಿಸುವಂತೆ ಹೇಳಿದರು. ಒಟ್ಟು ೮,೫೭,೧೫೫ ರೂ.ಲಾಭಾಂಶ ವಿತರಣೆ ಮಾಡಲಾಯಿತು.

ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ನೆಹರುತೋಟ, ಸದಸ್ಯರಾದ ಶೌಕತ್ ಆಲಿ, ಎ ಒಕ್ಕೂಟದ ಅಧ್ಯಕ್ಷ ಹರೀಶ್ಚಂದ್ರ, ಬಿ ಒಕ್ಕೂಟದ ಅಧ್ಯಕ್ಷ ಡೊಂಬಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಯೋಜನಾಧಿಕಾರಿ ಆನಂದ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಚಂದ್ರಶೇಖರ ವಂದಿಸಿದರು. ಆಂತರಿಕ ಲೆಕ್ಕಪರಿಶೋಧಕಿ ಲತಾ ಕಾರ್‍ಯಕ್ರಮ ನಿರೂಪಿಸಿದರು. ಚಂದ್ರಾವತಿ ನೆಹರುತೋಟ ಪ್ರಾರ್ಥಿಸಿದರು. ಸೇವಾಪ್ರತಿನಿಧಿಗಳಾದ ಭವ್ಯ, ಸೌಮ್ಯ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.