HomePage_Banner
HomePage_Banner

ಚುನಾವಣೆ ಡಿಸೆಂಬರ್‌ವರೆಗಿಲ್ಲ – ರಾಜ್ಯ ಸಂಪುಟ ಸಭೆಯಲ್ಲಿ ನಿರ್ಣಯ

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ದಶಂಬರ್ ಅಂತ್ಯದ ತನಕ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸದಿರಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಣಯ ಕೈಗೊಂಡಿದೆ.

 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಇನ್ನೇನು ಕೆಲವೇ ಕೆಲವೇ ಸಮಯದಲ್ಲಿ ನಡೆಯಬೇಕಾಗಿದ್ದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಇದೇ ಡಿಸೆಂಬರ್ ವರೆಗೆ ನಡೆಸದಿರಲು ಸಭೆಯಲ್ಲಿ ನಿರ್ಧರಿಸಲಾಗಿದೆ.ಆದರೆ ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ನಡೆಯಬೇಕಾದ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ.ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.

ಸಹಕಾರ ಇಲಾಖೆ ವ್ಯಾಪ್ತಿಗೆ ಬರುವ ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳಲ್ಲಿ ಅವಧಿ ಮುಗಿದ ನಿರ್ದೇಶಕ ಮಂಡಳಿಗೆ ಮಾತ್ರ ಚುನಾವಣೆ ನಡೆಸಲಾಗುವುದು.ಆದರೆ, ಜಿಲ್ಲಾಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್‌ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ 1,100 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸಲು ಉzಶಿತ, 240 ಕೋಟಿ ರೂ ವೆಚ್ಚದಲ್ಲಿ ನೇತ್ರಾವತಿ ನದಿಗೆ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದ ವಿಸ್ತತ ಯೋಜನಾ ವರದಿಗೆ ಸಭೆಯಲ್ಲಿ ದೃಢೀಕರಣ ನೀಡಲಾಯಿತು.

ಮೀಸಲಾತಿ ಕರಡು ಪ್ರಕಟವಾಗಿತ್ತು: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್‌ಗಳ ಆಡಳಿತ ಮಂಡಳಿ ಅವಧಿ ಈಗಾಗಲೇ ಮುಕ್ತಾಯವಾಗಿದ್ದು ಆಡಳಿತಾಧಿಕಾರಿಗಳನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದ್ದು ಅಧಿಕಾರಿಗಳು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮಧ್ಯೆ ನೂತನವಾಗಿ ಜಿ.ಪಂ.,ತಾ.ಪಂ.ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆಯೋಗ ಸಿದ್ಧತೆ ನಡೆಸಿತ್ತು. ಈಗಾಗಲೇ ಸದಸ್ಯರ ಕ್ಷೇತ್ರ ಮೀಸಲಾತಿ ಕುರಿತ ಕರಡು ಪಟ್ಟಿ ಪ್ರಕಟವಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿ ಪುತ್ತೂರು,ಕಡಬದಲ್ಲಿಯೂ ಹಲವು ಆಕ್ಷೇಪಣೆಗಳು ಸಲ್ಲಿಕೆಯಾಗಿರುವುದಾಗಿ ವರದಿಯಾಗಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಸರಕಾರ ಮುಂದಿನ ಡಿಸೆಂಬರ್ ತನಕ ಜಿ.ಪಂ., ತಾ.ಪಂ.ಚುನಾವಣೆ ನಡೆಸದೇ ಇರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.