HomePage_Banner
HomePage_Banner

ಜು.29 : ಸ್ವಂತ ಉದ್ಯೋಗ ಬಯಸುವವರಿಗಾಗಿ ಉದ್ಯಮಶೀಲತಾ ತಿಳುವಳಿಕೆ ಶಿಬಿರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ಮಂಗಳೂರು, ಪ್ರಣವ ಚಾರಿಟೇಬಲ್ ಟ್ರಸ್ಟ್ ಯೆಯ್ಯಾಡಿ ಹಾಗೂ ಪುತ್ತೂರು ಶ್ರೀಸರಸ್ವತಿ ಚಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ದರ್ಬೆ ಸಚ್ಚಿದಾನಂದ ಸೇವಾ ಸದನದಲ್ಲಿ ಜು.29ರಂದು ಬೆಳಿಗ್ಗೆ 9.30ರಿಂದ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ ನಡೆಯಲಿದೆ.

 

ಸ್ವಂತ ಉದ್ಯಮ ಸ್ಥಾಪಿಸಲು ಇಚ್ಚಿಸುವವರಿಗಾಗಿ ಆಯೋಜಿಸಿದ ಈ ಶಿಬಿರದಲ್ಲಿ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮ ನಿರ್ವಹಣೆ ಹಾಗೂ ಇತರ ಮಾಹಿತಿಗಳನ್ನು ನೀಡಲಾಗುವುದು. ಅಭ್ಯರ್ಥಿಗಳು 18 ವರ್ಷದಿಂದ 40 ವರ್ಷ ವಯಸ್ಸಿನವರಾಗಿರಬೇಕು. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಶಿಬಿರಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ 9485752647, 9483688835 ಸಂಪರ್ಕಿಸಬಹುದು ಎಂದು ಮಂಗಳೂರು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.