HomePage_Banner
HomePage_Banner

ದ್ವಿತೀಯ ಪಿಯುಸಿ: ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ೨೦೨೦-೨೧ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಗೆ ಉತ್ತಮ ಫಲಿತಾಂಶ ಲಭಿಸಿದೆ.

ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು ೧೦೫ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದರು. ಈ ಪೈಕಿ ೮ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೫೯ ವಿದ್ಯಾರ್ಥಿಗಳು ಪ್ರಥಮ ದರ್ಜೆ, ೩೫ ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ೩ ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದಾರೆ.

ಕಲಾ ವಿಭಾಗ:
ಕಲಾ ವಿಭಾಗದಲ್ಲಿ ಒಟ್ಟು ೬೨ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದು ಈ ಪೈಕಿ ೩ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, ೩೧ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ೨೫ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಮೂವರು ವಿದ್ಯಾರ್ಥಿಗಳು ಜಸ್ಟ್ ಮಾಸ್ ಆಗಿದ್ದಾರೆ. ಶ್ರಾವ್ಯ ಜೇಮ್ಸ್ ೫೮೮, ಸಾಯಿಧೃತಿ ಶೆಟ್ಟಿ ೫೩೦, ಎಂ.ಅನ್ವಿತಾ ಶೆಟ್ಟಿ ೫೧೧ ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ಒಟ್ಟು ೪೩ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದರು. ಈ ಪೈಕಿ ೫ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, ೨೮ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೧೦ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಪ್ರತೀಕ್ಷಾ ಎನ್ ೫೫೬, ಚೈತ್ರಾ ೫೩೪, ಹರ್ಷಿತ್ ಪಿ ೫೨೦, ಅಕ್ಷತಾಕುಮಾರಿ ೫೧೮, ಶ್ರದ್ಧಾ ಪಿ.ಕೆ.೫೧೨ ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.