ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ ರಾತ್ರಿ ವಾಹನ ಸಂಚಾರ ನಿಷೇಧ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಹಗಲು ಹೊತ್ತು ಲಘು ವಾಹನಗಳಿಗೆ ಮಾತ್ರ ಅವಕಾಶ

ಪುತ್ತೂರು:ಮಂಗಳೂರು-ಬೆಂಗಳೂರು ಹೆದ್ದಾರಿ ಹಾದುಹೋಗುವ ಶಿರಾಡಿ ಘಾಟ್‌ನ ದೋಣಿಗಲ್‌ನಲ್ಲಿ ರಸ್ತೆ ಕುಸಿತವಾಗಿರುವುದರಿಂದ ಭೂಕುಸಿತ ಉಂಟಾಗಿರುವುದರಿಂದಾಗಿ ಈ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.ಇದರಿಂದಾಗಿ ಕರಾವಳಿ ಭಾಗಕ್ಕೆ ಸಂಪರ್ಕ ರಸ್ತೆಯಾಗಿ ಬೆಂಗಳೂರು,ಚಿಕ್ಕಮಗಳೂರು, ಹಾಸನ ಮೊದಲಾದೆಡೆ ಪ್ರಯಾಣಿಸುವ ವಾಹನಗಳು ಅನಿವಾರ್ಯವಾಗಿ ಚಾರ್ಮಾಡಿ ಘಾಟಿಯನ್ನು ಅವಲಂಬಿಸಬೇಕಾಗಿತ್ತು.ಆದರೆ ಇದೀಗ ಚಾರ್ಮಾಡಿ ಘಾಟಿಯ 6ನೇ ತಿರುವಿನಲ್ಲಿ ಒಂದು ಬಂದಿ ರಸ್ತೆ ಕುಸಿತವಾಗಿರುವುದರಿಂದ ಈ ಭಾಗದಲ್ಲಿಯೂ ರಾತ್ರಿ 7 ಗಂಟೆಯಿಂದ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

 

ಚಾರ್ಮಾಡಿ ಘಾಟ್ ರಸ್ತೆಯು ಕಡಿದಾದ ತಿರುವುಗಳಿಂದ ಕೂಡಿದ್ದು, ಕೆಲವು ಕಡೆ ತುಂಬಾ ಕಿರಿದಾಗಿದೆ. ಭಾರೀ ಮಳೆಯಿಂದಾಗಿ ಬೃಹತ್ ಗಾತ್ರದ ಮರಗಳು ಧರೆಗುರುಳುವುದರ ಜೊತೆಗೆ ಭೂ ಕುಸಿತವು ಉಂಟಾಗುವ ಸಂಭವ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ರಾ.ಹೆ. 73ರ ಮಂಗಳೂರು-ತುಮಕೂರು ರಸ್ತೆಯ ಕಿ.ಮೀ. 75ರಿಂದ (ಚಾರ್ಮಾಡಿ ಗ್ರಾಮ) ಕಿ.ಮೀ. 86.20 (ದ.ಕ. ಜಿಲ್ಲಾ ಗಡಿ) ವರೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ತಕ್ಷಣದಿಂದ ಜಾರಿ ಬರುವಂತೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಸಂಜೆ 7ರಿಂದ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧಿಸಲಾಗಿದೆ.

ಸಂಚರಿಸಬಹುದಾದ ವಾಹನಗಳು: ಸಾರ್ವಜನಿಕರು ಸಂಚರಿಸುವ ಕೆಎಸ್ಸಾರ್ಟಿಸಿ ಕೆಂಪು ಬಸ್, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೊ ಟ್ರಾವೆಲರ್ಸ್, ಆಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್‌ಸಿವಿ (ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ಬೆಳಗ್ಗೆ ೬ರಿಂದ ಸಂಜೆ 7ಗಂಟೆವರೆಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ.

ನಿರ್ಬಂಧಿಸಲಾದ ವಾಹನಗಳು
ಬುಲೆಟ್ ಟ್ಯಾಂಕರ್ಸ್, ಷಿಕಪ್ ಕಾರ್ಗೊ ಕಂಟೈನರ್, ಲಾಂಗ್ ಚಾಸಿಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್, ಕೆಎಸ್ಸಾರ್ಟಿಸಿ ರಾಜಹಂಸ ಮತ್ತು ಎಲ್ಲ ಬಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ದಿನದ 24 ಗಂಟೆಯೂ ನಿರ್ಬಂಧಿಸಲಾಗಿದೆ.

ತುರ್ತು ವೈದ್ಯಕೀಯ ಸಂದರ್ಭದಲ್ಲಿ ಆಂಬುಲೆನ್ಸ್/ ಆಕ್ಸಿಜನ್ ವಿತರಣಾ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ 2021ರ ಎಪ್ರಿಲ್ 9ರಂದು ಹೊರಡಿಸಿದ ಆದೇಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.