ರಾಮಕುಂಜ: ಭೂಮಿಕಾ ಅಬ್ಬಾಸ್ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ರಾಮಕುಂಜ: ರಾಮಕುಂಜ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಮುಂಭಾಗದಲ್ಲಿರುವ ಭೂಮಿಕಾ ಕಾಂಪ್ಲೆಕ್ಸ್ ಮಾಲಕ ಅಬ್ಬಾಸ್(55ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಜು.೨೪ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ಮೂರು ವಾರದ ಹಿಂದೆ ಅಬ್ಬಾಸ್‌ರವರು ಅನಾರೋಗ್ಯಕ್ಕೆ ಒಳಗಾಗಿದ್ದು ಮಂಗಳೂರಿನ ಐ ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜು.೨೪ರಂದು ಬೆಳಿಗ್ಗೆ ಅವರು ನಿಧನರಾಗಿದ್ದಾರೆ. ಭೂಮಿಕಾ ಅಬ್ಬಾಸ್ ಎಂದೇ ಚಿರಪರಿಚಿತರಾಗಿದ್ದ ಇವರು ರಾಮಕುಂಜದಲ್ಲಿ ಭೂಮಿಕಾ ಕಾಂಪ್ಲೆಕ್ಸ್ ಹೊಂದಿದ್ದು ಉದ್ಯಮದಲ್ಲೂ ತೊಡಗಿಕೊಂಡಿದ್ದರು. ಅಬ್ಬಾಸ್‌ರವರು ಹಳೆನೇರೆಂಕಿ ಕೂಡುರಸ್ತೆ ಮೊಹಿಯ್ಯುದ್ದೀನ್ ಜುಮ್ಮಾ ಮಸೀದಿ ಮಾಜಿ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ರಾಮಕುಂಜ ಗ್ರಾಮ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ ಒಂದು ಬಾರಿ ಅವರು ರಾಮಕುಂಜ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರೊಂದಿಗೆ ಜಾಗ ಮಾರಾಟದ ಮಧ್ಯವರ್ತಿಯಾಗಿಯೂ ಕೆಲಸ ಮಾಡುತ್ತಿದ್ದರು. ಮೃತರು ಪತ್ನಿ ರಶೀದಾ, ಪುತ್ರ ಶಫೀಕ್, ಪುತ್ರಿಯರಾದ ಸಫ್ರೀನಾ, ಸಲೀನಾ, ಸಹನಾರನ್ನು ಅಗಲಿದ್ದಾರೆ. ಮೃತರ ಮನೆಗೆ ಕೆಪಿಸಿಸಿ ಸದಸ್ಯರಾದ ಡಾ.ರಘು, ಕೃಷ್ಣಪ್ಪ, ಜಿ.ಪಂ.ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ.ವರ್ಗೀಸ್, ರಾಮಕುಂಜ ಗ್ರಾ.ಪಂ.ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ., ಸದಸ್ಯ ಯತೀಶ್‌ಕುಮಾರ್ ಬಾನಡ್ಕ, ಸರ್ವೆಯರ್ ನವೀನ್, ಪರಿಮಳ ಸ್ಟುಡಿಯೋ ಮಾಲಕ ಕರುಣಾಕರ ಉರ್ಕ, ಆದಂ ಕಾಜರೊಕ್ಕು ಮತ್ತಿತರರು ಆಗಮಿಸಿ ಸಂತಾಪ ಸೂಚಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.