ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಲ್ಲಿ ನಿರ್ಮಾಣಗೊಂಡ ಮುಕ್ರಂಪಾಡಿ ಅಂಗನವಾಡಿ ಕೇಂದ್ರ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶಾಸಕರ ಪ್ರದೇಶಾಭಿವೃಧ್ಧಿ ಯೋಜನೆಯ ಅನುದಾನದಲ್ಲಿ ನಿರ್ಮಿಸಲಾದ ಮುಂಕ್ರುಂಪಾಡಿ ಅಂಗನವಾಡಿ ಕೇಂದ್ರದ ಉಧ್ಟಾಟನೆಯನ್ನು ಶಾಸಕ ಸಂಜೀವ ಮಠಂದೂರುರವರು ಜು.24ರಂದು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಅವರು ಮಾತನಾಡಿ ಮಹಿಳೆಯರ ಮತ್ತು ಮಕ್ಕಳ ಸರ್ವಾಂಗೀಣ ಬೆಳವಣಿಗೆಯ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳು ಇತ್ತೀಚಿನ ದಿನಗಳಲ್ಲಿ ಸುಸಜ್ಜಿತವಾಗಿ ,ಎಲ್ಲಾ ವ್ಯವಸ್ಥೆಗಳನ್ನು ಒಳಗೊಂಡು ಗ್ರಾಮದ ಅಭಿವೃದ್ಧಿ ತನ್ನ ಕೊಡುಗೆಯನ್ನು ನೀಡುತ್ತಿರುವುದು ಅಭಿನಂದನೀಯ,ನೂತನವಾಗಿ ನಿರ್ಮಿಸಿರುವ ಈ ಅಂಗನವಾಡಿ ಕೇಂದ್ರ ಮಕ್ಕಳ ಚಟುವಟಿಕೆಯ ತಾಣವಾಗಿ ಎಂದು ಶುಭ ಹಾರೈಸಿದರು.

ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್ ಅವರು ಮಾತನಾಡಿ ನಗರ ಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯಗಳ ಅಭಿವೃಧ್ಧಿಗೆ ನಗರ ಸಭೆಯು ಯೋಜನೆ ರೂಪಿಸಿದ್ದು,ಅನುದಾನದ ಲಭ್ಯತೆಗನುಸಾರ ಕ್ರಮಕೈಗೊಳ್ಳಲಾಗುವುದು ಎಂದರು. ನಗರ ಸಭೆಯ ಸದಸ್ಯರಾದ ದೀಕ್ಷಾ ಪೈ, ಶ್ರೀಮತಿ ಇಂದಿರಾ, ನಗರ ಸಭೆಯ ಪೌರಾಯುಕ್ತ ಮಧು. ಎಸ್ ಮನೋಹರ, ಸಿಡಿಪಿಒ ಶ್ರೀಲತಾ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.