HomePage_Banner
HomePage_Banner
HomePage_Banner
HomePage_Banner

ಪಾಣಾಜೆ ರಣಮಂಗಲ ದೇವಾಲಯದ ಗದ್ದೆಯಲ್ಲಿ ಭತ್ತ ಬೇಸಾಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಹಿಂದಿನ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ- ಸಂಜೀವ ಮಠಂದೂರು
ನಿಡ್ಪಳ್ಳಿ;ಹಿಂದಿನಿಂದಲೂ ಹಿರಿಯರು ಆಚರಿಸಿ ಕೊಂಡು ಬಂದ ಸಂಸ್ಕ್ರತಿ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವುದು ಕಿರಿಯರಾದ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಅವರು ‌ಜು.25 ರಂದು ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ನಡೆದ ಭತ್ತ ಬೇಸಾಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಕೃಷಿಯನ್ನು ನಂಬಿಕೊಂಡು ಬಂದ ನಮ್ಮ ಹಿರಿಯರ ಪರಂಪರೆ ಪದ್ದತಿಗಳನ್ನು ಮುಂದುವರಿಸಿ ಕೊಂಡು ಹೋಗುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ‌ಅವರು ಹೇಳಿದರು.ಪುತ್ತೂರು ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು  ಬಹಳ ವೇಗವಾಗಿ ನಡೆಯುತ್ತಿದ್ದು ಮುಂದೆ ಶೀಘ್ರದಲ್ಲಿ ಪಾಣಾಜೆ ಕ್ಷೇತ್ರದ ವಿವಿಧ  ಅಭಿವೃದ್ಧಿಗೆ ಒಂದೂವರೆ ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮುಖ್ಯ ಅತಿಥಿಗಳಾಗಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದ್ಯಮಿ ಕೇಶವ ಪ್ರಸಾದ್ ಮುಳಿಯ ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ರಣಮಂಗಲ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶ್ರೀ ಕೃಷ್ಣ ಬೊಳಿಲ್ಲಾಯ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಪುತ್ತೂರು ಬಿ.ಜೆ.ಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.    
ಗ್ರೀಷ್ಮಾ ಗುರಿಕೇಲು ಪ್ರಾರ್ಥಿಸಿ, ಸೇವಾ ಭಾರತಿ ಪ್ರಮುಖ್ ಡಾ.ಅಖಿಲೇಶ್ ಪಾಣಾಜೆ ಕಾರ್ಯಕ್ರಮ ನಿರೂಪಿಸಿದರು. ‌ಪಾಣಾಜೆ.ಸಿ.ಎ ಬ್ಯಾಂಕ್ ನಿರ್ದೇಶಕ ರವೀಂದ್ರ ಭಂಡಾರಿ ವಂದಿಸಿದರು.
ಪಿಡಬ್ಲ್ಯೂಡಿ ಗುತ್ತಿಗೆದಾರ ಸದಾಶಿವ ರೈ ಸೂರಂಬೈಲು, ಉದ್ಯಮಿ ಉಪೇಂದ್ರ ಬಲ್ಯಾಯ, ಪಂಚಾಯತ್ ಸದಸ್ಯರಾದ ಸುಭಾಷ್ ರೈ, ಮೋಹನ ನಾಯ್ಕ, ಪಾಣಾಜೆ ಹಾಲುತ್ಪಾದಕರ ಸಹಕಾರಿ ಸಂಘದ ನಿರ್ದೇಶಕ ಉಮೇಶ್ ಬಲ್ಯಾಯ, ಯೋಜನೆಯ ಬೆಟ್ಟಂಪಾಡಿ ವಲಯ ಮೆಲ್ವೀಚಾರಕ ಶಿವಪ್ಪ, ಪಾಣಾಜೆ ಒಕ್ಕೂಟದ ಅಧ್ಯಕ್ಷೆ ಯಶೋಧ, ಸೇವಾ ಪ್ರತಿನಿಧಿ ಜಯಶ್ರೀ.ಡಿ ಹಾಗೂ ನೂರಕ್ಕೂ ಮಿಕ್ಕಿ ಸಾರ್ವಜನಿಕರು  ನೇಜಿ ನಾಟಿಯಲ್ಲಿ  ಭಾಗವಹಿಸಿದರು.ಸೇವಾ ಭಾರತಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪಾಣಾಜೆ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಸಹಕರಿಸಿದರು.
     
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.