HomePage_Banner
HomePage_Banner
HomePage_Banner
HomePage_Banner

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮ.ನ.ಪಾದ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ.ಪಿ.ಶಿವರಾಜುಗೆ 5ವರ್ಷ ಶಿಕ್ಷೆ, 34 ಲಕ್ಷ ರೂ.ದಂಡ 

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲ್ಯಾನಿಂಗ್ ಅಕಾರಿಯಾಗಿದ್ದ ಬಿ.ಪಿ.ಶಿವರಾಜುಗೆ 5 ವರ್ಷ ಶಿಕ್ಷೆ ಮತ್ತು 34 ಲಕ್ಷ ರೂ.ದಂಡ ವಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.ದಿನಾಂಕ 25.07.2007ರಂದು ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ.ಪಿ.ಶಿವರಾಜುರವರು ತಮ್ಮ ಸೇವಾ ಅವಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ಆಗಿನ ಲೋಕಾಯುಕ್ತ ಇನ್‌ಸ್ಪೆಕ್ಟರ್ ಪ್ರಸನ್ನ ವಿ.ರಾಜು ಮಾಹಿತಿ ಕಲೆ ಹಾಕಿದ್ದು, ಆಗಿನ ಲೋಕಾಯುಕ್ತ ಉಪಾಕ್ಷಕರು ಮತ್ತು ಅವರ ತಂಡ ಕೇಸು ದಾಖಲಿಸಿ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.ಸುಮಾರು ಮೂವತ್ತೆಂಟು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು.ಡಿ.ವೈ.ಎಸ್.ಪಿ. ಡಾ.ಪ್ರಭುದೇವ್ ಮಾಣೆರವರು ತನಿಖೆ ಪೂರ್ಣಗೊಳಿಸಿ ಆರೋಪಿ ಶಿವರಾಜು ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಅಭಿಯೋಜನೆಯ ಪರವಾಗಿ ೨೭ ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಹಾಗೂ 160 ದಾಖಲೆಗಳನ್ನು ಹಾಜರು ಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್‌ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು, ಹದಿನೇಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಸೇವೆಗೆ ಸೇರಿದ ವರ್ಷದಿಂದ ದಾಳಿ ನಡೆದ ದಿನಾಂಕದ ವರೆಗೆ ಆರೋಪಿ ಹೊಂದಿದ್ದರೆಂದು ನ್ಯಾಯಾಲಯದಲ್ಲಿ ಸಾಬೀತಾದ ಹಿನ್ನಲೆಯಲ್ಲಿ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಶ ಬಿ.ಬಿ.ಜಕಾತಿರವರು ಜು.26ರಂದು ಶಿಕ್ಷೆ ಪ್ರಕಟಿಸಿದ್ದಾರೆ.ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 13(1) (e)ರ ಜೊತೆಗೆ 13(2)ರ ಅಡಿಯಲ್ಲಿ ಆರೋಪಿ ಶಿವರಾಜು ಅಪರಾಧ ಎಸಗಿದ್ದಾರೆಂದು ಸಾಬೀತಾಗಿದೆ.ಅಸೌಖ್ಯದ ಕಾರಣ ನೀಡಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕೆಂದು ಆರೋಪಿಯು ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದರು.ಭ್ರಷ್ಟಾಚಾರ ಪ್ರಕರಣವಾದ್ದರಿಂದ ಗರಿಷ್ಟ ಶಿಕ್ಷೆ ವಿಸಬೇಕೆಂದು ವಿಶೇಷ ಸರಕಾರಿ ಅಭಿಯೋಜಕರು ನ್ಯಾಯಾಲಯವನ್ನು ಕೋರಿದ್ದರು.

ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಾಧೀಶ ಬಿ.ಬಿ.ಜಕಾತಿಯವರು ಅಪರಾಧಿಗೆ 5 ವರ್ಷ ಸಾದಾ ಸಜೆ ಮತ್ತು ರೂ ೩೪ ಲಕ್ಷ ರೂ.ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಸಾದಾ ಸಜೆ ವಿಸಿದರು.ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಱಭ್ರಷ್ಟಾಚಾರ ಎಂಬುದು ಸಮಾಜದಲ್ಲಿ ಕ್ಯಾನ್ಸರ್ ಪಿಡುಗಿನಂತೆ ಆಗಿದ್ದು ಅಪರಾಗೆ ಯಾವುದೇ ರಿಯಾಯಿತಿ ನೀಡುವುದು ಸರಿಯಲ್ಲ ಮತ್ತು ಕಳೆದ ಹದಿನಾಲ್ಕು ವರ್ಷಗಳಿಂದ ಅಕ್ರಮ ಆಸ್ತಿ ರೂ. 17,00,000ವನ್ನು ಅಪರಾಧಿ ಬಿ.ಪಿ.ಶಿವರಾಜು ಅನುಭವಿಸಿರುವುದರಿಂದ ಎರಡುಪಟ್ಟು ದಂಡ ವಿಸುವುದು ಸೂಕ್ತ ಎಂದು ರೂ. 34 ಲಕ್ಷ ರೂ.ದಂಡ ಪಾವತಿಸಲು ಆದೇಶಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.