HomePage_Banner
HomePage_Banner
HomePage_Banner
HomePage_Banner

ಬಸವರಾಜ್ ಬೊಮ್ಮಾಯಿಗೆ ಸಿಎಂ ಪಟ್ಟ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಜು.28ರಂದು ಪ್ರಮಾಣವಚನ ಸ್ವೀಕಾರ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ಬೊಮ್ಮಾಯಿರವರು ನೇಮಕಗೊಂಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಈ ನೇಮಕ ನಡೆದಿದೆ.

 

ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಸವರಾಜ್ ಬೊಮ್ಮಾಯಿ ರವರು ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಪುತ್ರ. ಜು.೨೭ರಂದು ನೂತನ ಮುಖ್ಯಮಂತ್ರಿಯ ಆಯ್ಕೆಯ ಕುರಿತು ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಅಲ್ಲದೇ ಬಿಜೆಪಿ ಕೋರ್ ಕಮಿಟಿಯಿಂದಲೂ ನೇಮಕ ಮಾಡಲಾಗಿದೆ. ಈ ಕುರಿತು ಚುನಾವಣಾ ವೀಕ್ಷಕರು ಅಧಿಕೃತವಾಗಿ ಘೋಷಣೆಯನ್ನು ಮಾಡಿದ್ದಾರೆ. ಸಿಎಂ ಯಡಿಯೂರಪ್ಪ ರಾಜೀನಾಮೆಯ ಬೆನ್ನಲ್ಲೇ ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾರಾಗುತ್ತಾರೆ ಅನ್ನೋ ಕುತೂಹಲ ವ್ಯಕ್ತವಾಗಿತ್ತು. ಮಾತ್ರವಲ್ಲ ಹಲವರ ಹೆಸರುಗಳು ಮುಖ್ಯಮಂತ್ರಿ ಹುದ್ದೆಗೆ ಕೇಳಿಬಂದಿತ್ತು. ಯಡಿಯೂರಪ್ಪ ಅವರು ಬಸವರಾಜ್ ಬೊಮ್ಮಾಯಿ ಅವರ ಹೆಸರನ್ನು ಸೂಚನೆಯನ್ನು ಮಾಡಿದ್ದರು. ತಮಗೆ ಆಪ್ತರಾಗಿದ್ದ ಬೊಮ್ಮಾಯಿ ಅವರನ್ನೇ ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಹಂಗಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಚುನಾವಣಾ ವೀಕ್ಷಕರಾದ ರಾಕೇಶ್ ರೆಡ್ಡಿ, ಧರ್ಮೇಂದ್ರ ಪ್ರಧಾನ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ. ನಾಳೆ ಬಸವರಾಜ್ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.