HomePage_Banner
HomePage_Banner
HomePage_Banner
HomePage_Banner

ಅಕ್ರಮ ಗಾಂಜಾ ಸಾಗಾಟ: ಇಬ್ಬರ ಬಂಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ನೇತೃತ್ವದ ತಂಡದ ಕಾರ್ಯಾಚರಣೆ

ವಿಟ್ಲ:ಅಟೋ ರಿಕ್ಷಾವೊಂದರಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ಹೆಚ್.ಇ.ನಾಗರಾಜ್‌ರವರ ನೇತೃತ್ವದ ಪೊಲೀಸರ ತಂಡ ಜು.27ರಂದು ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಕಾಶಿಮಠ ಎಂಬಲ್ಲಿ ಬಂಧಿಸಿದೆ.

 

ಬಂಟ್ವಾಳ ತಾಲೂಕು ಸಜಿಪಮೂಡ ಗ್ರಾಮದ ಸುಭಾಶ್‌ನಗರ ಗುರುಮಂದಿರ ಸಮೀಪದ ದಿ.ಇಬ್ರಾಹಿಂರವರ ಪುತ್ರ ಆಸೀಫ್ ಯಾನೆ ಅಚಿ(28ವ.) ಹಾಗೂ ಕಡಬ ತಾಲೂಕು ಸವಣೂರು ಗ್ರಾಮದ ಮಾಂತೂರು ಸಮೀಪದ ಚಾಪಳ್ಳ ಮಸೀದಿ ಬಳಿಯ ನಿವಾಸಿ ಇಬ್ರಾಹಿಂರವರ ಪುತ್ರ ಫಯಾಜ್(23 ವ.) ಬಂಧಿತ ಅರೋಪಿಗಳಾಗಿದ್ದಾರೆ.

ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ಹೆಚ್.ಇ.ನಾಗಾರಾಜ್‌ರವರ ನೇತೃತ್ವದ ಪೊಲೀಸರ ತಂಡ ಜು.27ರಂದು ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದರು.ಈ ವೇಳೆ ಉಕ್ಕುಡ ಕಡೆಯಿಂದ ವಿಟ್ಲ ಪೇಟೆ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾವನ್ನು ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಅದರ ಚಾಲಕ ಆಟೋವನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಲು ಪ್ರಯತ್ನ ಪಟ್ಟಿದ್ದ ವೇಳೆ ಆಟೋ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಯಿತು.ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಆಟೋದಲ್ಲಿದ್ದವರನ್ನು ರಕ್ಷಿಸಲು ಧಾವಿಸುತ್ತಿದ್ದಂತೆ ಆಟೋದಲ್ಲಿದ್ದವರು ಪರಾರಿಯಾಗಲೆತ್ನಿಸಿದರು.ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಆಟೋದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಟೋ ರಿಕ್ಷಾದೊಳಗೆ ಚಾಲಕನ ಸೀಟಿನ ಕೆಳಗಡೆ ಬಟ್ಟೆಯಲ್ಲಿ ಸುತ್ತಿಟ್ಟಿದ್ದ 2060 ಗ್ರಾಂ ಗಾಂಜಾ ಪತ್ತೆಯಾಗಿದೆ.ಕೂಡಲೇ ಅವರಿಬ್ಬರನ್ನು ಠಾಣೆಗೆ ಕರೆದೊಯ್ದು ಇನ್ನಷ್ಟು ವಿಚಾರಣೆ ನಡೆಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ತಂದಿರುವುದಾಗಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂತ ಆರೋಪಿಗಳಿಂದ ಒಂದು ಅಟೋರಿಕ್ಷಾ ಹಾಗೂ ಅರುವತ್ತು ಸಾವಿರ ರೂಪಾಯಿ ಮೌಲ್ಯದ 2060 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಆಟೋರಿಕ್ಷಾ ಹಾಗೂ ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಎರಡು ಲಕ್ಷದ ಹತ್ತು ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಠಾಣಾ ಪ್ರೊಬೆಷನರಿ ಪಿಎಸ್‌ಐ ಮಂಜುನಾಥ, ಸಿಬಂದಿಗಳಾದ ಪ್ರಸನ್ನ, ಪ್ರತಾಪ್, ಲೋಕೇಶ್, ಪ್ರವೀಣ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.