ಫಾಳಿಲಾ ಕೋರ್ಸ್ ಪಠ್ಯ ಪುಸ್ತಕಗಳನ್ನು ಕನ್ನಡದಲ್ಲಿ ಪ್ರಕಟಿಸುವಂತೆ ಆಗ್ರಹ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕೆಮ್ಮಾರ ಶಂಸುಲ್ ಉಲಮಾ ಶರೀಅತ್ ಕಾಲೇಜು ಆಡಳಿತ ಮಂಡಳಿ ಮನವಿ

ಉಪ್ಪಿನಂಗಡಿ: ಕೇರಳದ ಚೇಳಾರಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಇಸ್ಲಾಮಿಕ್ ಶಿಕ್ಷಣ ಮಂಡಳಿಯಾದ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಅಧೀನದಲ್ಲಿ ಎಸ್ಸೆಸ್ಸೆಲ್ಸಿ. ನಂತರದ ವಿದ್ಯಾರ್ಥಿನಿಯರಿಗೆ ಪಿಯುಸಿ. ಜೊತೆಗೆ ಧಾರ್ಮಿಕ ಸಮನ್ವಯ ಶಿಕ್ಷಣ ವ್ಯವಸ್ಥೆಯಾದ ಸಮಸ್ತ ವಿಮೆನ್ಸ್ ಇಸ್ಲಾಮಿಕ್ ಆರ್ಟ್ಸ್ ಕಾಲೇಜು ಫಾಳಿಲ ಕೋರ್ಸ್ ಪಠ್ಯಕ್ರಮವನ್ನು ಕನ್ನಡದಲ್ಲಿ ಪ್ರಕಟಿಸುವಂತೆ ಕೆಮ್ಮಾರ ಶಂಸುಲ್ ಉಲಮಾ ಶರೀಅತ್ ಕಾಲೇಜು ಆಡಳಿತ ಮಂಡಳಿ ಕೇಂದ್ರ ಸಂಸ್ಥೆಯನ್ನು ಮನವಿ ಮಾಡಿದೆ.

 


ಧಾರ್ಮಿಕ ಸಮನ್ವಯ ಶಿಕ್ಷಣ ವ್ಯವಸ್ಥೆಯಾದ ಸಮಸ್ತ ವಿಮೆನ್ಸ್ ಇಸ್ಲಾಮಿಕ್ ಆರ್ಟ್ಸ್ ಕಾಲೇಜು ಫಾಳಿಲ ಕೋರ್ಸ್ ಪ್ರಸಕ್ತ ಸಾಲಿನ ಪ್ರಥಮ ಹಾಗೂ ದ್ವಿತೀಯ ವರ್ಷದ ಫೈನಲ್ ಪಬ್ಲಿಕ್ ಪರೀಕ್ಷೆ ಮುಕ್ತಾಯಗೊಂಡಿದ್ದು ಸಮಸ್ತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ವಿದ್ಯಾರ್ಥಿನಿಗಳು ಮಾತೃ ಭಾಷೆಯಾದ ಕನ್ನಡದಲ್ಲಿ ಪರೀಕ್ಷೆ ಬರೆದಿದ್ದಾರೆ. ಇದು ಸ್ವಾಗತಾರ್ಹವಾಗಿದ್ದು, ಮುಂದಿನ ದಿನಗಳಲ್ಲಿ ಫಾಳಿಲಾ ಕೋರ್ಸಿನ ಇಸ್ಲಾಮಿಕ್ ಹಿಸ್ಟರಿ, ಹೋಂ ಸೈನ್ಸ್ ಮೊದಲಾದ ಕೆಲವು ಪಠ್ಯ ಪುಸ್ತಕಗಳನ್ನಾದರೂ ಕನ್ನಡದಲ್ಲಿ ಪ್ರಕಟಿಸುವಂತೆ ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಇವರ ಮೂಲಕ ಕರ್ನಾಟಕದ ಕನ್ನಡಿಗರ ಪರವಾಗಿ ಸಮಸ್ತಕ್ಕೆ ಮನವಿ ಸಲ್ಲಿಸಿದ್ದಾರೆ. ಮನವಿ ಸಲ್ಲಿಸಿದ ಸಂದರ್ಭದಲ್ಲಿ ಕೆಮ್ಮಾರ ಶಂಸುಲ್ ಉಲಮಾ ಶರೀಅತ್ ಕಾಲೇಜು ಆಡಳಿತ ಸಮಿತಿ ಅಧ್ಯಕ್ಷ ಎನ್.ಎ. ಇಸಾಕ್, ಸಂಚಾಲಕ ಹುಸೈನ್ ಬಡಿಲ, ಕಾಲೇಜಿನ ಪ್ರಾಂಶುಪಾಲ ಹನೀಫ್ ದಾರಿಮಿ ನೆಕ್ಕಿಲಾಡಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.